Advertisement
ಬೆಂಗಳೂರಿನಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಣ ಸಂಬಂಧ ಕೋವಿಡ್ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಹೇಳಿದ್ದಾರೆ.
Related Articles
Advertisement
ಶಾಲೆ ಆರಂಭಿಸುವ ಬಗ್ಗೆ ಚರ್ಚೆಯನ್ನು ನಡೆಸಿದ್ದು ಪಾಸಿಟಿವಿಟಿ ದರ ಶೇ. 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುವುದು, ಆದರೆ ಪೋಷಕರು, ಶಿಕ್ಷಕರು, ಸಿಬ್ಬಂದಿಗಳು ಲಸಿಕೆ ಪಡೆದುಕೊಂಡಿರಬೇಕು, ಶಾಲೆ ಆರಂಭವಾದ ಬಳಿಕ ಪಾಸಿಟಿವಿಟಿ ದರ 2 ಕ್ಕಿಂತ ಹೆಚ್ಚಾದಲ್ಲಿ ಮತ್ತೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹಬ್ಬದ ದಿನದಲ್ಲಿ ಹೆಚ್ಚು ಜನ ಒಂದೇ ಕಡೆ ಸೇರದಂತೆ ಎಚ್ಚರವಹಿಸಬೇಕು ಅಲ್ಲದೆ ಹಬ್ಬಗಳ ಆಚರಣೆ ಈ ಹಿಂದಿನ ಮಾರ್ಗಸೂಚಿಗಳೇ ಮುಂದುವರಿಯಲಿದೆ ಎಂದರು, ರಾಜ್ಯದಲ್ಲಿ ಕೋವಿಡ್ ಪರೀಕ್ಷಾ ಸಂಖ್ಯೆಯನ್ನು ಹೆಚ್ಚು ಹೆಚ್ಚು ಮಾಡಿಸಬೇಕು ಜೊತೆಗೆ ಲಸಿಕೆ ವಿತರಣೆಗೂ ವೇಗ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.