ಬೆಂಗಳೂರು: ರಾತ್ರಿ ವೇಳೆ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ದೊಡ್ಡಪೇಟೆ ವೃತ್ತದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಆಕ್ಟೀವಾ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಈ ಅಕ್ರಮ ಚಿನ್ನದ ವಿಚಾರ ಬೆಳಕಿಗೆ ಬಂದಿದೆ. ಇವರು ಯಾವುದೇ ದಾಖಲೆ ಪತ್ರಗಳಿಲ್ಲದೆ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಸಾಗಾಟ ಮಾಡುತ್ತಿದ್ದರು.
ಪೊಲೀಸರು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಮುಂಬೈ ನಿವಾಸಿ ದಳಪತಿ ಸಿಂಗ್ (34) ಮತ್ತು ರಾಜಸ್ಥಾನ್ ನಿವಾಸಿ ವಿಕಾಸ್ (35) ಎಂದು ಗುರುತಿಸಲಾಗಿದೆ.
ಪೊಲೀಸರು ಸದ್ಯ ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಈ ಚಿನ್ನಾಭರಣಗಳ ಹಿಂದಿನ ಸತ್ಯ ಇನ್ನಷ್ಟೇ ಬೆಳಕಿಗೆ ಬರಬೇಕಿದೆ.