Advertisement

ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಚನೆ ಇಲ್ಲ: ನಿಖೀಲ್‌

10:37 AM Aug 17, 2020 | sudhir |

ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಯೋಚನೆ ತನ್ನಲ್ಲಿಲ್ಲ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖೀಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ಉಪ ಚುನಾವಣೆಯಲ್ಲಿ ತಾನು ಸ್ಪರ್ಧಿಸುತ್ತಿದ್ದೇನೆ ಎಂಬ ವದಂತಿಗಳನ್ನು ಯಾರು ಹಬ್ಬಿಸುತ್ತಾರೆ ಹಾಗೂ ಅವರ ಉದ್ದೇಶವೇನು ಎಂಬುದು ತನಗೆ ತಿಳಿದಿಲ್ಲ. ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ಅನಿವಾರ್ಯವಾಗಿದೆ. ಹಾಗಂತ ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲ ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next