ಕನಕಪುರ: “ಅಭ್ಯರ್ಥಿಗಳನ್ನು ಘೋಷಣೆ ಮಾಡಲು ನಾವು ದಿಲ್ಲಿಗೆ ಹೋಗಬೇಕಾಗಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರ ಸಮ್ಮುಖದಲ್ಲಿ ಆಯ್ಕೆ ಮಾಡುತ್ತೇವೆ ಇದು ಪ್ರಾದೇಶಿಕ ಪಕ್ಷದ ಶಕ್ತಿ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖೀಲ್ ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಉಯಂಬಳ್ಳಿ ಹೋಬಳಿ ಹೆಗ್ಗನೂರು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಕನಕಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಜೆಡಿಎಸ್ ಈಗಾಗಲೇ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಬಿಡದಿಯ ದೇವೇಗೌಡರ ಮನೆಯಲ್ಲೇ ಎಲ್ಲ ತೀರ್ಮಾನಗಳನ್ನೂ ಕೈಗೊಳ್ಳಲಾಗುತ್ತದೆ ಎಂದರು.
ಇದನ್ನೂ ಓದಿ: ಭೇಟೆಗೆಂದು ತೆರೆಳಿದ್ದ ವ್ಯಕ್ತಿಯನ್ನು ಗುಂಡಿಟ್ಟು ಕೊಂದ ಶ್ವಾನ ! ನಡೆದಿದ್ದರೂ ಏನು?