Advertisement

ತಂದೆಯಾದ ಖುಷಿಯಲ್ಲಿ ನಿಖಿಲ್|ಹೆಚ್‍ಡಿಕೆ ಮನೆಗೆ ಹೊಸ ಅತಿಥಿ ಆಗಮನ  

01:35 PM Sep 24, 2021 | Team Udayavani |

ಬೆಂಗಳೂರು :  ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಇಂದು ನಿಖಿಲ್ ಕುಮಾರ ಸ್ವಾಮಿ ಹಾಗೂ ರೇವತಿ ದಂಪತಿ ತಂದೆ-ತಾಯಿ ಆಗಿ ಬಡ್ತಿ ಪಡೆದಿದ್ದಾರೆ.

Advertisement

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ತಾತನಾದ್ರೇ.ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗಳು ಗಂಡು ಮಗುವಿಗೆ ತಂದೆ-ತಾಯಿಗಳಾಗಿದ್ದಾರೆ.

ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಮನೆ ಮಾಡಿದ ಸಂಭ್ರಮ ಮನೆ ಮಾಡಿದೆ. ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿರೋದಾಗಿ ವೈದ್ಯರು ತಿಳಿಸಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯವನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಚಾರಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next