Advertisement

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

12:08 AM May 05, 2024 | Team Udayavani |

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಪ್ರಕರಣದ ಬಗ್ಗೆ ತಮ್ಮ ಭಾವನೆ ಹಾಗೂ ಬೇಸರವನ್ನು ಹೊರಹಾಕಿದ್ದಾರೆ.

Advertisement

ಮಾಜಿ ಪ್ರಧಾನಿ ಎಚ್‌.ಡಿ.ದೇವೇ ಗೌಡ ರನ್ನು ಅವರ ಪದ್ಮನಾಭನಗರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದಿಂದ ದೇವೇಗೌಡರು ಸಾಕಷ್ಟು ನೊಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರನ್ನು ಈ ಪ್ರಕರಣದಲ್ಲಿ ಎಳೆದು ತರುವುದು ಸೂಕ್ತವಲ್ಲ. ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ. ಅವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ. ವೀಡಿಯೋ ನೋಡಲು ನನಗೆ ಧೈರ್ಯ ಬರಲಿಲ್ಲ ಎಂದು ಹೇಳಿದರು.

ನನಗೆ 4 ದಿನಗಳಿಂದ ವೈರಲ್‌ ಜ್ವರ ಇತ್ತು. ಹಾಗಾಗಿ ಅಜ್ಜಿ-ತಾತಾ ಜತೆಗೆ ಫೋನ್‌ ನಲ್ಲಿ ಮಾತ್ರ ಮಾತನಾಡಿದ್ದೆ. ಈಗ ಬಂದು ಅವರ ಆರೋಗ್ಯ ವಿಚಾರಿಸಿದ್ದೇನೆ. ವಿಶೇಷವಾಗಿ ದೇವೇಗೌಡ‌ರ ಜೀವನ ತೆರೆದ ಪುಸ್ತಕವಾಗಿದ್ದು, ಅಜ್ಜಿ ಚೆನ್ನಮ್ಮ ಜತೆಗೆ ನಮ್ಮ ತಾತಾ ಯಾವ ರೀತಿ ಬದುಕಿದ್ದರು ಎನ್ನುವುದು ನಮಗೆ ಸ್ಫೂರ್ತಿಯಾಗಿದೆ. ದೇವೇಗೌಡರಿಗೆ 92 ವರ್ಷ ಆಗಿದ್ದು, ಈ ಘಟನೆಯಿಂದ ಸಹಜವಾಗಿ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಒಬ್ಬರೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಅಜ್ಜಿ ಕೂಡ ಬಹಳ ನೋವಿನಲ್ಲಿದ್ದಾರೆ ಎಂದು ಹೇಳಿದರು.

ನಾನು ಹಾಸನಕ್ಕೆ ಹೆಚ್ಚಾಗಿ ಹೋಗುತ್ತಿಲ್ಲ. ಹಾಸನಾಂಬೆ ಉತ್ಸವಕ್ಕೆ ಮಾತ್ರ ಹೋಗುತ್ತೇನೆ. ಆದರೂ ಹಾಸನಕ್ಕೆ ಭೇಟಿ ಕೊಟ್ಟು ಕಾರ್ಯ ಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇನೆ. ಕುಮಾರಣ್ಣ ಕೂಡ‌ ಹಾಸನಕ್ಕೆ ಹೋಗುತ್ತಾರೆ ಎಂದು ನಿಖಿಲ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next