ಮದ್ದೂರು: ಮುಂಬರುವ 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದಲ್ಲಿ ಪ್ರವಾಸ ಕೈಗೊಂಡು, ಎಚ್.ಡಿ.ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಶ್ರಮಿಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖೀಲ್‌ಕುಮಾರಸ್ವಾಮಿ ತಿಳಿಸಿದರು.
ಪಟ್ಟಣದ ಪೇಟೇಬೀದಿಯಲ್ಲಿ ಶ್ರೀಮತಿ ಸಿಲ್ಕ್ ಆ್ಯಂಡ್ ಕಂಚಿಕೋ ನೂತನ ಮಳಿಗೆ ಅನಾವರಣಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ದಿನಗಳಲ್ಲಿ 30 ಜಿಲ್ಲೆಗಳ ಪ್ರವಾಸ ಕೈಗೊಂಡು ಯುವಕರನ್ನು ಸಂಘಟಿಸುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ ತಂದು ರೈತ, ಕಾರ್ಮಿಕರ ಪ್ರಗತಿಗಾಗಿಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿಸುವುದೇ ತಮ್ಮ ಧ್ಯೆಯ ಎಂದರು.
ಪಕ್ಷ ಸಂಘಟನೆಗೆ ಸೂಚನೆ: ತಾಲೂಕು, ಜಿಲ್ಲಾ ಅಧ್ಯಕ್ಷರ ಸಭೆ ನಡೆಸಿ ಪ್ರತಿ ಗ್ರಾಮದಲ್ಲೂ ಪಕ್ಷ ಸಂಘಟನೆ, ಮುಂಬರುವ ಚುನಾವಣೆಗೆ ಇಂದಿನಿಂದಲೇ ಕಾರ್ಯಕರ್ತರನ್ನು ಸಿದ್ಧಗೊಳಿಸುತ್ತೇವೆ. ಈಗಾಗಲೇ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಸಚಿವರ ಸಭೆ ನಡೆಸಿ, ಪಕ್ಷ ಸಂಘಟನೆಗೆಸೂಚಿಸಿದ್ದಾರೆ. ಎಲ್ಲಾ ವರ್ಗದವರನ್ನು ವಿಶ್ವಾಸಕ್ಕೆತೆಗೆದುಕೊಂಡು ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಈ ಸಂಬಂಧ ಮಾಜಿ ಪ್ರಧಾನಿಎಚ್.ಡಿ. ದೇವೇಗೌಡ ಅವರು ತಮಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.
ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ: ಪ್ರಸಕ್ತ ಎದುರಾಗಿರುವ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಚುನಾವಣೆ ಎದುರಿಸಲಿದೆ. ಸ್ಥಳೀಯ ಚುನಾವಣೆಯಲ್ಲಿ ಕಾರ್ಯಕರ್ತರ ಪರ ಕರ್ತವ್ಯ ನಿರ್ವಹಿಸಿ ಶಕ್ತಿ ತುಂಬುವ ಕೆಲಸಕ್ಕೆ ಮುಂದಾಗಲು ಸ್ಥಳೀಯ ಶಾಸಕರೊಂದಿಗೆ ಚರ್ಚಿಸುತ್ತೇವೆ ಎಂದು ಹೇಳಿದರು.
ರೈತರ ಅಭಿವೃದ್ಧಿಗಾಗಿ ಮೈತ್ರಿ: ಜಿಲ್ಲೆಯ ರೈತರ ಅಭಿವೃದ್ಧಿಗಾಗಿ ಡಿಸಿಸಿ ಬ್ಯಾಂಕ್‌ನಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತೆ ಹೊರತು, ಯಾವ ಉದ್ದೇಶವಿಲ್ಲ. ಈ ಸಂಬಂಧ ಬಿಜೆಪಿ ವರಿಷ್ಠರೊಂದಿಗೆ ಕುಮಾರಸ್ವಾಮಿ ಅವರುಚರ್ಚಿಸಿ, ತೀರ್ಮಾನ ಕೈಗೊಂಡಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಸ್ವತಂತ್ರ ಪಕ್ಷವಾಗಿ ಚುನಾವಣೆ ಎದುರಿಸಲಿದೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ತೀರ್ಮಾನವೇ ಅಂತಿಮ. ಮಂಡ್ಯ, ರಾಮನಗರ ಎರಡು ಕಣ್ಣುಗಳಿದ್ದಂತೆ. ಪಕ್ಷವಿರುವುದು ಕಾರ್ಯಕರ್ತರಿಂದಲೇ ಹೊರತು ನಮ್ಮಿಂದಲ್ಲ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ತಾವು ಬದ್ಧರಾಗಿದ್ದೇವೆ ಎಂದರು.
ಪುರಸಭೆ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಸುಮಿತ್ರ ರಮೇಶ್, ಸದಸ್ಯರಾದ ಸಿದ್ದರಾಜು, ಬಸವರಾಜು,ವನಿತಾ, ಪ್ರಮೀಳಾ, ಜೆಡಿಎಸ್ ಘಟಕದ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಮುಖಂಡರಾದ ಡಿ.ಟಿ.ಸಂತೋಷ್, ಕೆ. ದಾಸೇಗೌಡ, ಯೋಗೇಶ್, ಮರಿಮಾದೇಗೌಡ ಹಾಜರಿದ್ದರು.