ಬೆಂಗಳೂರು : ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ.
ಈ ಕುರಿತು ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅವರು, ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಪ್ರಾಥಮಿಕ ವರದಿಯಲ್ಲಿ ಕೋವಿಡ್ ಪಾಸಿಟಿವ್ ದೃಢವಾಗಿದೆ. ತನ್ನ ಜೊತೆ ಕಳೆದ ಕೆಲ ದಿನಗಳಿಂದ ಸಂಪರ್ಕಕಕ್ಕೆ ಬಂದವರು ಪರೀಕ್ಷೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಹೋಂ ಕ್ವಾರಂಟೈನ್ ಗೆ ವೈದ್ಯರ ಸಲಹೆ
ಇಂದು ಮುಂಜಾನೆಯಷ್ಟೇ ನಿಖಿಲ್ ಅವರ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಕೋವಿಡ್ ಪತ್ತೆಯಾದ ವಿಚಾರವನ್ನು ನಿಖಿಲ್ ಹಂಚಿಕೊಂಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಹೆಚ್ ಡಿ. ದೇವೇಗೌಡ ದಂಪತಿಗೆ ಕೋವಿಡ್ ಸೋಂಕು ಪತ್ತೆಯಾಗಿತ್ತು.