ಕೆ.ಆರ್.ನಗರ: ಮುಖ್ಯಮಂತ್ರಿಗಳ ಪುತ್ರ ನಿಖಿಲ್‌ಕುಮಾರಸ್ವಾಮಿ ಗೆಲುವಿಗೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು.
ಪಟ್ಟಣದ ಬಸವೇಶ್ವರ ಬಡಾವಣೆಯ ಜೆಡಿಎಸ್ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಇರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಎರಡು ಪಕ್ಷದ ಬೆಂಬಲಿತ ಅಭ್ಯರ್ಥಿ ಆಯ್ಕೆಯಾದರೆ ಅಭಿವೃದ್ಧಿಗೆ ಅನುಕೂಲವಾಗಲಿದೆ.
ಕಾರ್ಯಕರ್ತರು ಮತ್ತು ಮುಖಂಡರು ಭಿನ್ನಾಭಿಪ್ರಾಯ ಮರೆತು ಮೈತ್ರಿ ಕೂಟದ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕವಾಗಿ ದುಡಿಯಬೇಕೆಂದರು. ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ನಗರಾಧ್ಯಕ್ಷ ಡಿ.ಸಿ.ಮಂಜುನಾಥ್, ತಾಲೂಕು ಯುವ ಜೆಡಿಎಸ್ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್‌ಕುಮಾರ್, ವಕ್ತಾರ ಕೆ.ಎಲ್.ರಮೇಶ್,
ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಪುರಸಭೆ ಮಾಜಿ ಅಧ್ಯಕ್ಷರಾದ ವೈ.ಆರ್.ಪ್ರಕಾಶ್, ಹರ್ಷಲತಾ ಶ್ರೀಕಾಂತ್, ಮಾಜಿ ಸದಸ್ಯರಾದ ಸಿ.ಉಮೇಶ್, ಎಚ್.ಸಿ.ರಾಜು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಸಿ.ಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯ ಎಚ್.ಪಿ.ಶಿವಣ್ಣ ಮತ್ತಿತರರಿದ್ದರು.