Advertisement

ನಿಖಿಲ್‌ ಮದುವೆ: ವಾಹನ ಪಾಸ್‌ ವಿವರ ಕೇಳಿದ ಕೋರ್ಟ್‌

07:54 AM May 13, 2020 | Lakshmi GovindaRaj |

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರ ಪುತ್ರ ನಿಖಿಲ್‌ ಮದುವೆ ಕಾರ್ಯಕ್ರಮಕ್ಕೆ ನೀಡಲಾಗಿದ್ದ ವಾಹನ ಪಾಸ್‌ಗಳ ವಿವರ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಈ ಕುರಿತು ವಕೀಲೆ ಗೀತಾ  ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್‌. ಓಕಾ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

Advertisement

ಈ ವೇಳೆ, ಮದುವೆ ಕಾರ್ಯಕ್ರಮಕ್ಕೆ ಎಷ್ಟು  ವಾಹನ ಪಾಸ್‌ ನೀಡಲಾಗಿತ್ತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಮೇ 5ರ ಆದೇಶದಲ್ಲಿ ಹೇಳಲಾಗಿತ್ತು. ಆದರೆ, ಸರ್ಕಾರ ಈವರೆಗೆ ಅದರ ಬಗ್ಗೆ ಮಾಹಿತಿ ಕೊಟ್ಟಿಲ್ಲ. ಹಾಗಾದರೆ, ಮದುವೆ ಕಾರ್ಯಕ್ರಮಕ್ಕೆ ವಾಹನ ಪಾಸ್‌ ನೀಡಲಾಗಿತ್ತೇ  ಅಥವಾ ಇಲ್ಲ, ಕೊಟ್ಟಿದ್ದರೆ, ಎಷ್ಟು ವಾಹನಗಳಿಗೆ ಪಾಸ್‌ ಕೊಡಲಾಗಿತ್ತು ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಮೇ 18ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next