Advertisement
ನೀಲಹಳ್ಳಿ, ಕಣೇಕಲ್ ಗ್ರಾಮಗಳ ಜನತೆ ನಿತ್ಯದ ವ್ಯಾಪಾರ ವಹಿವಾಟಿಗಾಗಿ ಜಿಲ್ಲಾ ಕೇಂದ್ರ ಯಾದಗಿರಿಯನ್ನೇಅವಲಂಬಿಸಿದ್ದು, ಇದೇ ರಸ್ತೆಯಲ್ಲಿ ಸಂಚರಿಸಬೇಕಿದೆ. ಇದಲ್ಲದೇ ನೀಲಹಳ್ಳಿ ಗ್ರಾಮದ ಜನತೆ ಈ ಹಾಳಾದ ರಸ್ತೆಯಲ್ಲಿ ತಮ್ಮ ಹೊಲಗದ್ದೆಗಳಿಗೆ ತೆರಳಬೇಕಾಗಿದೆ. ಈ ರಸ್ತೆಯಲ್ಲಿ ಎದ್ದಿರುವ ಜಲ್ಲಿ ಕಲ್ಲು ಸಂಚಾರಕ್ಕೆ ಅಯೋಗ್ಯವಾಗಿದ್ದು, ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಬಾಬುರಾವ್ ಚಿಂಚನಸೂರ ಅವರಿಗೆ ಗಡಿ ಭಾಗದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಾದರೂ ನೀಲಹಳ್ಳಿ ಗ್ರಾಮದಿಂದ ಯಾದಗಿರಿ ರಸ್ತೆ ದುರಸ್ತಿಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಆದರೆ ಸಂಬಂಧಿಸಿದ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಯಾವ ರೀತಿಯ
ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Related Articles
ಅಲ್ಲಾವುದ್ಧೀನ್, ನೀಲಹಳ್ಳಿ ಗ್ರಾಮಸ್ಥ
Advertisement