Advertisement

ನೀಲಹಳ್ಳಿ ರಸ್ತೆಗಿಲ್ಲ ದುರಸ್ತಿ ಭಾಗ್ಯ

05:38 PM Jan 29, 2018 | |

ಸೈದಾಪುರ: ಯಾದಗಿರಿ-ರಾಯಚೂರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಿಂದ ನೀಲಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ.

Advertisement

ನೀಲಹಳ್ಳಿ, ಕಣೇಕಲ್‌ ಗ್ರಾಮಗಳ ಜನತೆ ನಿತ್ಯದ ವ್ಯಾಪಾರ ವಹಿವಾಟಿಗಾಗಿ ಜಿಲ್ಲಾ ಕೇಂದ್ರ ಯಾದಗಿರಿಯನ್ನೇ
ಅವಲಂಬಿಸಿದ್ದು, ಇದೇ ರಸ್ತೆಯಲ್ಲಿ ಸಂಚರಿಸಬೇಕಿದೆ. ಇದಲ್ಲದೇ ನೀಲಹಳ್ಳಿ ಗ್ರಾಮದ ಜನತೆ ಈ ಹಾಳಾದ ರಸ್ತೆಯಲ್ಲಿ ತಮ್ಮ ಹೊಲಗದ್ದೆಗಳಿಗೆ ತೆರಳಬೇಕಾಗಿದೆ. ಈ ರಸ್ತೆಯಲ್ಲಿ ಎದ್ದಿರುವ ಜಲ್ಲಿ ಕಲ್ಲು ಸಂಚಾರಕ್ಕೆ ಅಯೋಗ್ಯವಾಗಿದ್ದು, ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. 

ಕಳೆದ ಹಲವು ವರ್ಷಗಳಿಂದ ಹಾಳಾದ ರಸ್ತೆ ದುರಸ್ತಿಗೊಳಿಸುವ ಗೋಜಿಗೆ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಹೋಹಿಲ್ಲ. ಈ ವಿಷಯದಲ್ಲಿ ಇವರು ಮೌನ ವಹಿಸಿದ್ದು, ಇದು ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ. ಗುರುಮಠಕಲ್‌ ಮತಕ್ಷೇತ್ರದವರೇ ಆದ ಶಾಸಕ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಬಾಬುರಾವ್‌ ಚಿಂಚನಸೂರ ಅವರಿಗೆ ಗಡಿ ಭಾಗದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಮುಂದಿನ ದಿನಗಳಲ್ಲಾದರೂ ನೀಲಹಳ್ಳಿ ಗ್ರಾಮದಿಂದ ಯಾದಗಿರಿ ರಸ್ತೆ ದುರಸ್ತಿಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಆದರೆ ಸಂಬಂಧಿಸಿದ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಯಾವ ರೀತಿಯ
ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ನೀಲಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಅರ್ಧ ಭಾಗದಲ್ಲಿ ಜಲ್ಲಿಕಲ್ಲು ಎದ್ದಿದ್ದು, ಇದರಿಂದ ಗಡಿ ಭಾಗದ ಜನ ತೀರಾ ತೊಂದರೆ ಅನುಭವಿಸುತ್ತಿದ್ದಾರೆ. ಗುರುಮಠಕಲ್‌ ಮತಕ್ಷೇತ್ರದ ಶಾಸಕ ಬಾಬುರಾವ್‌ ಚಿಂಚನಸೂರ ಬಣ್ಣ ಬಣ್ಣದ ಮಾತುಗಳ ಮೂಲಕ ತಾವು ಕ್ಷೇತ್ರಾದ್ಯಂತ ಅಭಿವೃದ್ಧಿಯ ಹೊಳೆ ಹರಿಸಿದ್ದೇನೆ ಎಂದು ಜನರಿಗೆ ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವ ಸ್ಥಿತಿಯೇ ಬೇರೆಯಾಗಿದೆ.
 ಅಲ್ಲಾವುದ್ಧೀನ್‌, ನೀಲಹಳ್ಳಿ ಗ್ರಾಮಸ್ಥ

Advertisement
Advertisement

Udayavani is now on Telegram. Click here to join our channel and stay updated with the latest news.

Next