Advertisement

ಗ್ರಾ.ಪಂ. ಚುನಾವಣೆ ವಿಚಾರದಲ್ಲಿ ಬಿಜೆಪಿ – ಕಾಂಗ್ರೆಸ್ ಮಧ್ಯೆ ಗಲಾಟೆ: ಲಘು ಲಾಠಿ ಪ್ರಹಾರ

01:22 PM Jul 26, 2023 | Team Udayavani |

ಬೆಳಗಾವಿ: ತಾಲೂಕಿನ ನಿಲಜಿ ಗ್ರಾಮ ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಹಣಿ ಏರ್ಪಟ್ಟಿದ್ದು ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ಗಲಾಟೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

Advertisement

ಎರಡು ಗುಂಪುಗಳ‌ ಮಧ್ಯೆ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಗ್ರಾಪಂ ಅಧ್ಯಕ್ಷೆ ಆಕಾಂಕ್ಷಿ ಆಗಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶೀಲಾ ತಿಪ್ಪಣ್ಣವರ ಅವರು ಚುನಾವಣೆ ನಡೆಯುವಾಗಲೇ ಹೊರ ಬಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಬೆಂಬಲಿತ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ.‌ ಪರಿಣಾಮ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿದೆ. ಎಸಿಪಿ ಗಿರೀಶ್ ಎನ್ ವಿ ಭರಮನಿ ಸೇರಿದಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ: ವಿಜಯಪುರ: 12ರ ಬಾಲೆ ಮೇಲೆ ಅತ್ಯಾಚಾರವೆಸಗಿದ 60ರ ವೃದ್ಧನಿಗೆ 20 ವರ್ಷ ಜೀವಾವಧಿ ಶಿಕ್ಷೆ

Advertisement

Udayavani is now on Telegram. Click here to join our channel and stay updated with the latest news.

Next