Advertisement

ಮೊದಲ ತಮಿಳು ಚಿತ್ರದ ಶೂಟಿಂಗ್‌ನಲ್ಲಿ ನೀನಾಸಂ ಸತೀಶ್‌

03:00 PM Jan 10, 2021 | Team Udayavani |

ನಟ ನೀನಾಸಂ ಸತೀಶ್‌ “ಪಗೈವಾನಕ್ಕು ಅರುಲ್ವಾಯ್‌’ ಎಂಬ ತಮಿಳು ಚಿತ್ರದಲ್ಲಿ ಅಭಿನಯಿಸುತ್ತಿರುವ ವಿಷಯವನ್ನು ಕೆಲ ದಿನಗಳ ಹಿಂದಷ್ಟೇ ತಿಳಿಸಿದ್ದರು. ಇದೀಗ ನೀನಾಸಂ ಸತೀಶ್‌ ಆ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಚಿತ್ರದ ಚಿತ್ರೀಕರಣದ ಫೋಟೋಗಳನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿರುವ ಸತೀಶ್‌, ತಮ್ಮ ಮೊದಲ ತಮಿಳು
ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದ್ದಾರೆ.

Advertisement

ಇನ್ನು ಸಸ್ಪೆನ್ಸ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸತೀಶ್‌ ಖೈದಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಸತೀಶ್‌ ಅಭಿನಯದ ಬಹುಭಾಗ ಚಿತ್ರೀಕರಣ ಜೈಲಿನಲ್ಲಿಯೇ ನಡೆಯಲಿದೆ ಎಂದು ಹೇಳಲಾಗುತ್ತಿದೆ. ತಮಿಳಿನ ಖ್ಯಾತ ನಟ
ಶಶಿಕುಮಾರ್‌, ಬಿಂದು ಮಾಧವಿ ಮೊದಲಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next