Advertisement

ಸತೀಶ್‌ ಕೈಯಲ್ಲಿ ಅಶೋಕ ಬ್ಲೇಡ್

02:11 PM May 20, 2022 | Team Udayavani |

ನೀನಾಸಂ ಸತೀಶ್‌ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ “ಅಶೋಕ ಬ್ಲೇಡ್‌’ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಚಿತ್ರದಲ್ಲಿ ಸತೀಶ್‌ ನಾಯಕನಾಗುವುದರ ಜೊತೆ ಸಹ ನಿರ್ಮಾಪಕನಾಗಿಯೂ ಜವಾಬ್ದಾರಿ ಹೊತ್ತಿದ್ದಾರೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್‌ ಪಿಕ್ಚರ್‌ ಹೌಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರಕ್ಕೆ ವಿನೋದ್‌ ದೊಂಡಾಳೆ ನಿರ್ದೇಶಕರಾಗಿದ್ದಾರೆ.

Advertisement

ಚಿತ್ರದ ಮೊದಲ ಸನ್ನಿವೇಶಕ್ಕೆ ಪಿ.ಶೇಷಾದ್ರಿ ಆರಂಭ ಫ‌ಲಕ ತೋರಿದರು. ಟ.ಎನ್‌.ಸೀತಾರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

“ಸ್ನೇಹಿತ ಟಿ.ಕೆ. ದಯಾನಂದ್‌ ಅವರ ಹತ್ತಿರ ಒಂದೊಳ್ಳೆಯ ಕಥೆ ಇದೆ ಎಂದು ಗೊತ್ತಾಯಿತು. ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಇದೇ ನಮ್ಮ ಸಂಸ್ಥೆಯ ಮೊದಲ ಚಿತ್ರವಾಗಬೇಕು ಎಂದು ತೀರ್ಮಾನಿಸಿ ಚಿತ್ರ ಮಾಡುತ್ತಿದ್ದೇವೆ. ಸತೀಶ್‌ ನೀನಾಸಂ ಸಹ ಕೈ ಜೋಡಿಸಿದ್ದಾರೆ. ವರ್ತಕರು ಮತ್ತು ಕಾರ್ಮಿಕರ ನಡುವೆ ನಡೆಯುವ ಯುದ್ಧದ ಕುರಿತು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ನಿರ್ದೇಶಕ ವಿನೋದ್‌ ದೊಂಡಾಳೆ ಮಾಹಿತಿ ನೀಡಿದರು.

“ದಯಾನಂದ್‌ ಅವರ ಬಳಿ ಒಳ್ಳೆಯ ಕಥೆ ಇದೆ ಎಂದು ಕೇಳಿದೆ. ತರಿಸಿ ಓದಿದೆ. ತಕ್ಷಣ ಈ ಚಿತ್ರವನ್ನು ಮಾಡಬೇಕು ಎಂದನಿಸಿತು. ಇದೊಂದು ದೊಡ್ಡ ಕ್ಯಾನ್ವಾಸ್‌ನ ಚಿತ್ರ. ಒಂದು ಐತಿಹಾಸಿಕ ಯುದ್ಧವಿದೆ. 10 ನಿಮಿಷಗಳ ಕಾಲ ಸಾವಿರ ಜನ ಭಾಗವಹಿಸುವ ಯುದ್ಧ. ಅದನ್ನು ವಿನೋದ್‌ ಸಮರ್ಥವಾಗಿ ತೆರೆಯ ಮೇಲೆ ತರುತ್ತಾರೆ ಎಂಬ ನಂಬಿಕೆ ಇದೆ. ಈ ಯುದ್ಧದಲ್ಲಿ ಒಬ್ಬ ಸೂಪರ್‌ ಸ್ಟಾರ್‌ ಕಾಣಿಸಿಕೊಳ್ಳಲಿದ್ದಾರೆ.ಉತ್ತರಖಾಂಡ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ’ ಎಂದರು ನೀನಾಸಂ ಸತೀಶ್‌.

ಚಿತ್ರದ ನಾಯಕ ನಟಿ ಕಾವ್ಯ ಶೆಟ್ಟಿ, ನಿರ್ಮಾಪಕ ನರಹರಿ, ಚಿತ್ರಕಥೆಗಾರ ಟಿ.ಕೆ.ದಯಾನಂದ್‌, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಲವಿತ್‌ ಹಾಗೂ ನಟ ಬಿ.ಸುರೇಶ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

ವಿಭಿನ್ನ ಪಾತ್ರಗಳಲ್ಲಿ ಕಾವ್ಯಾ ಮಿಂಚು

ಆರಂಭದಿಂದಲೂ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ನಟಿ ಕಾವ್ಯಾ ಶೆಟ್ಟಿ ಈಗ ಮತ್ತೂಂದು ಅಂಥದ್ದೇ ವಿಭಿನ್ನ ಟೈಟಲ್‌ನ ವಿಶೇಷ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಅಂದಹಾಗೆ, ಕಾವ್ಯಾ ಶೆಟ್ಟಿ ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು “ಅಶೋಕ ಬ್ಲೇಡ್‌’. ಇನ್ನು ಈ ಚಿತ್ರದಲ್ಲಿ ಕಾವ್ಯಾ ಶೆಟ್ಟಿ ಇನ್ಸ್‌ಪೆಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಎರಡು ಕಾಲಘಟ್ಟದಲ್ಲಿ “ಅಶೋಕ ಬ್ಲೇಡ್‌’ ಸಿನಿಮಾದ ಕಥೆ ನಡೆಯಲಿದ್ದು, ಮೊದಲ ಬಾರಿಗೆ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎನ್ನುವುದು ಕಾವ್ಯಾ ಮಾತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next