ಬೆಂಗಳೂರು: ರಾಜ್ಯದಲ್ಲಿ ಒಂಬತ್ತು ಜಿಲ್ಲೆಗಳಲ್ಲಿ ಸಿಂಗಲ್ ಡೋಸ್ ಲಸಿಕೆ ನೀಡಿಕೆ ಪೂರ್ಣವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಒಂಬತ್ತು ಜಿಲ್ಲೆಗಳು 100% ಮೊದಲ ಡೋಸ್ ವ್ಯಾಪ್ತಿಯನ್ನು ಸಾಧಿಸಿವೆ! ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತದ ನಿರಂತರ ಪರಿಶ್ರಮಕ್ಕಾಗಿ ಅಭಿನಂದನೆಗಳು. ಕರ್ನಾಟಕದಲ್ಲಿ ಒಟ್ಟಾರೆ 97.5% ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಜನವರಿ 15ರವರೆಗೆ ರಾತ್ರಿ ಕರ್ಫ್ಯೂ ಜಾರಿ, ಶಾಲಾ, ಕಾಲೇಜು ಬಂದ್:ಪಂಜಾಬ್ ಸರ್ಕಾರ
ರಾಜ್ಯದ ಬೆಂಗಳೂರು ನಗರ, ಗದಗ, ವಿಜಯಪುರ, ಬೀದರ್, ಬಾಗಲಕೋಟೆ, ಧಾರವಾಡ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಶೇ.100 ಮೊದಲ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ದಾವಣಗೆರೆ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಶೇ.99 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ.