Advertisement

Tragedy: ಅಪರಿಚಿತ ವಾಹನ ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ 9 ಮಂದಿ ಮೃತ್ಯು, ಹಲವರಿಗೆ ಗಾಯ

08:28 AM Feb 21, 2024 | Team Udayavani |

ಪಾಟ್ನಾ: ಅಪರಿಚಿತ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

Advertisement

ಬಿಹಾರದ ಲಖಿಸರಾಯ್-ಸಿಕಂದ್ರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಟೋ ಲಖಿಸರಾಯ್‌ನಿಂದ ಸಿಕಂದ್ರ ಕಡೆಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ವೇಳೆ ಆಟೋರಿಕ್ಷಾದಲ್ಲಿ ಸುಮಾರು 15 ಮಂದಿ ಇದ್ದರು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದ ತೀವ್ರತೆಗೆ ಮೃತ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಮೃತರಲ್ಲಿ ರಿಕ್ಷಾ ಚಾಲಕ ಮನೋಜ್ ಕುಮಾರ್ ಕೂಡ ಸೇರಿದ್ದಾರೆ ಎನ್ನಲಾಗಿದೆ.
ಅಪಘಾತದ ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಡಿಕ್ಕಿ ಹೊಡೆದು ಪರಾರಿಯಾದ ವಾಹನದ ಪತ್ತೆಗೆ ಬಲೆ ಬೀಸಿದ್ದಾರೆ.

Advertisement

ಇದನ್ನೂ ಓದಿ: Daily Horoscope: ಉದ್ಯೋಗ ರಂಗದಲ್ಲಿ ಹೊಸ ಅವಕಾಶಗಳು ತಾವಾಗಿ ಅರಸಿಕೊಂಡು ಬರುವ ಸಾಧ್ಯತೆ

Advertisement

Udayavani is now on Telegram. Click here to join our channel and stay updated with the latest news.