ಛತ್ತೀಸ್‌ಗಢ: ಭದ್ರತಾ ಸಿಬ್ಬಂದಿಗಳು ನಡೆಸಿದ ಎನ್‌ಕೌಂಟರ್ ನಲ್ಲಿ ಒಂಬತ್ತು ಮಂದಿ ಮಾವೋವಾದಿಗಳು ಹತರಾಗಿರುವ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ವೇಳೆ ಲೆಂಡ್ರಾ ಗ್ರಾಮದ ಬಳಿಯ ಅರಣ್ಯದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಮೆಷಿನ್ ಗನ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಒಳಗೊಂಡಂತೆ ಹಲವಾರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.
ಬಸ್ತಾರ್ ಪ್ರದೇಶದಲ್ಲಿರುವ ಬಿಜಾಪುರವು ಮಾವೋವಾದಿಗಳ ಚಟುವಟಿಕೆಯ ಕೇಂದ್ರವಾಗಿದೆ. ಈ ವರ್ಷ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸುಮಾರು 41 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಈ ಎನ್‌ಕೌಂಟರ್ ನಡೆದಿದ್ದು. ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
ಇದನ್ನೂ ಓದಿ: Delhi ಕಚೋರಿ ಶಾಪ್ ಗೆ ನುಗ್ಗಿದ ಮರ್ಸಿಡಿಸ್ ಕಾರು…ಪ್ರಾಣಾಪಾಯದಿಂದ ಗ್ರಾಹಕರು ಪಾರು!