Advertisement

2027ಕ್ಕೆ ನ್ಯಾ|ನಾಗರತ್ನಾ ಮೊದಲ ಮಹಿಳಾ ಸಿಜೆಐ

11:58 PM Aug 26, 2021 | Team Udayavani |

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾ| ಬಿ.ವಿ. ನಾಗರತ್ನಾ ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.

Advertisement

ಅವರ ಜತೆಗೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಒಕಾ ಕೂಡ ಸುಪ್ರೀಂಕೋರ್ಟ್‌ಗೆ ಪದೋನ್ನತಿ ಪಡೆದಿದ್ದಾರೆ.

ಮೂವರು ಮಹಿಳಾ ನ್ಯಾಯಮೂರ್ತಿಗಳ ಸಹಿತ ಒಟ್ಟು ಒಂಭತ್ತು ಮಂದಿ ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್‌ಗೆ ಪದೋನ್ನತಿ ನೀಡುವ ಕೊಲೀಜಿಯಂ ಶಿಫಾರಸಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಗುರುವಾರ ಅಂಕಿತ ಹಾಕಿದ್ದಾರೆ.

ಆ. 17ರಂದು ಸುಪ್ರಿಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಕೊಲೀಜಿಯಂ ಹೆಸರುಗಳನ್ನು ಅಂತಿಮ ಪಡಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next