Advertisement

ಕೋವಿಡ್ ಸೋಂಕಿನಿಂದ ಗುಣಮುಖರಾದ ಬೆಳಗಾವಿಯ 9 ಜನರು ಬಿಡುಗಡೆ

06:21 PM May 24, 2020 | keerthan |

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

Advertisement

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಪಿ-545, ಪಿ-700, ಪಿ- 713, ಪಿ-714, ಪಿ-715, ಪಿ-718, ಪಿ-720, ಪಿ-722, ಪಿ-719 ಸಂಖ್ಯೆ ಯ ಸೋಂಕು ಪೀಡಿತರು ಬಿಡುಗಡೆ ಹೊಂದಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next