Advertisement

Kerala: 14 ವರ್ಷದ ಬಾಲಕನಲ್ಲಿ ನಿಫಾ ಸೋಂಕು ದೃಢ ; ಮುಂಜಾಗ್ರತಾ ಕ್ರಮ

09:13 PM Jul 20, 2024 | Team Udayavani |

ಮಲಪ್ಪುರಂ: ಜಿಲ್ಲೆಯಲ್ಲಿ 14 ವರ್ಷದ ಬಾಲಕನಿಗೆ ನಿಪಾ ಸೋಂಕು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ಹೇಳಿದ್ದಾರೆ.

Advertisement

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಪುಣೆಯ NIV (National Institute of Virology) ಸೋಂಕು ದೃಢಪಡಿಸಿದೆ ಎಂದು ತಿಳಿಸಿದ್ದಾರೆ.

ವೆಂಟಿಲೇಟರ್‌ನಲ್ಲಿರುವ ಬಾಲಕನನ್ನು ಕೋಝಿಕ್ಕೋಡ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುತ್ತಿದ್ದು, ಸೋಂಕು ಸಂಪರ್ಕ ಪತ್ತೆಹಚ್ಚುವಿಕೆ ಕಾರ್ಯ ಪ್ರಾರಂಭವಾಗಿದೆ. ಹೆಚ್ಚಿನ ಅಪಾಯದ ಸಂಪರ್ಕಗಳನ್ನು ಈಗಾಗಲೇ ಪ್ರತ್ಯೇಕಿಸಲಾಗಿದ್ದು ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪಂಡಿಕ್ಕಾಡ್ ಸೋಂಕಿನ ಕೇಂದ್ರಬಿಂದುವಾಗಿದ್ದು, ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಆರಂಭಿಸಲಾಗಿದೆ ಎಂದು ವೀಣಾ ಜಾರ್ಜ್ ತಿಳಿಸಿದರು.

ಹತ್ತಿರದ ಆಸ್ಪತ್ರೆಗಳ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸಲು ಮತ್ತು ಆಸ್ಪತ್ರೆಗಳಿಗೆ ತೆರಳಿ ರೋಗಿಗಳನ್ನು ಭೇಟಿ ಮಾಡುವುದನ್ನು ತಪ್ಪಿಸುವಂತೆ ಸಚಿವೆ ಕೇಳಿಕೊಂಡಿದ್ದಾರೆ.

ಈ ಹಿಂದೆ ನಾಲ್ಕು ಕೇರಳವನ್ನು ಕಾಡಿದ್ದ ನಿಫಾ ತಡೆಗೆ ವಿಶೇಷ ಕ್ರಿಯಾ ಕ್ಯಾಲೆಂಡರ್ ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು. 2018, 2021, ಮತ್ತು 2023 ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಮತ್ತು 2019 ರಲ್ಲಿ ಎರ್ನಾಕುಲಂ ಜಿಲ್ಲೆಯಲ್ಲಿ ನಿಫಾ ಏಕಾಏಕಿ ವರದಿಯಾಗಿತ್ತು ಕೋಝಿಕ್ಕೋಡ್, ವಯನಾಡ್, ಇಡುಕ್ಕಿ, ಮಲಪ್ಪುರಂ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಬಾವಲಿಗಳಲ್ಲಿ ನಿಫಾ ವೈರಸ್ ಪ್ರತಿಕಾಯಗಳು ಪತ್ತೆಯಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next