Advertisement

Nipah Virus: ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಸೋಂಕು ಭೀತಿ; ಇಬ್ಬರು ಆಸ್ಪತ್ರೆಗೆ

07:20 PM Aug 24, 2024 | Team Udayavani |

ಕಾಸರಗೋಡು: ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಸೋಂಕು ಭೀತಿ ಆವರಿಸಿದೆ. ನಿಫಾ ಸೋಂಕು ತಗಲಿರುವುದಾಗಿ ಸಂಶಯಿಸಲಾಗುತ್ತಿರುವ ಕಣ್ಣೂರು ಜಿಲ್ಲೆಯ ಇಬ್ಬರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಇವರನ್ನು ತೀವ್ರ ಜ್ವರ ಮತ್ತು ವಾಂತಿ ಅನುಭವದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪರಿಯಾರಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಅವರಿಬ್ಬರಿಗೆ ನಿಫಾ ಸೋಂಕು ತಗಲಿದ ಶಂಕೆ ವ್ಯಕ್ತಪಡಿಸಿದ್ದರು. ಅದರಿಂದ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಇಬ್ಬರ ಗಂಟಲ ರಸ ಸಹಿತ ಇತರ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆಯ ವೈರಾಲಜಿ ಲ್ಯಾಬ್‌ಗ ಕಳುಹಿಸಿಕೊಡಲಾಗಿದೆ. ಅದರ ವರದಿ ಬಂದ ಬಳಿಕವಷ್ಟೇ ಈ ವಿಷಯದಲ್ಲಿ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವೆಂದು ವೈದ್ಯರು ತಿಳಿಸಿದ್ದಾರೆ.

ನಿಫಾ ಶಂಕೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಂದರ್ಶಕರಿಗೆ ಪೂರ್ಣ ನಿಷೇಧ ಹೇರಲಾಗಿದೆ. ಆಸ್ಪತ್ರೆಗೆ ಬರುವ ಸರ್ವರಿಗೆ ಮಾಸ್ಕ್ ದಾರಣೆ ಕಡ್ಡಾಯಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next