Advertisement
ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಬಾವಂತಬೆಟ್ಟು ನಿವಾಸಿಯಾಗಿರುವ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು 1987ರಿಂದ ಈವರೆಗೆ ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿದ್ದರು. ಅವರು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆರಂಭಗೊಂಡ 1983ರಿಂದ ಸುದೀರ್ಘ 41 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ದಾಖಲೆ ಅವರದ್ದಾಗಿದೆ. ದ.ಕ. ಜಿ.ಪಂ. ಸದಸ್ಯರಾಗಿ, ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಹಿರಿಯ ಸಹಕಾರಿ ಧುರೀಣ ಬಾವಂತಬೆಟ್ಟು ನಿರಂಜನ್ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು. ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರಿ ರಂಗದಲ್ಲಿ ಅವರು ಉತ್ತಮ ಸೇವೆ-ಸಾಧನೆ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುವುದಾಗಿ ಡಾ| ಡಿ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ. ಡಾ| ಎಂ.ಎನ್.ಆರ್. ಸಂತಾಪ
ಹಿರಿಯ ಸಹಕಾರಿಯಾಗಿ, ಆದರ್ಶ ವ್ಯಕ್ತಿತ್ವ ಮೈಗೂಡಿಸಿಕೊಂಡಿದ್ದ ನಿರಂಜನ್ ಅವರು ಸರಳ ಸಜ್ಜನ ವ್ಯಕ್ತಿ. ಎಲ್ಲರಿಗೂ ಆತ್ಮೀಯರಾಗಿದ್ದ ಅವರು ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಸುಮಾರು 37 ವರ್ಷಗಳಿಂದ ನಿರ್ದೇಶಕರಾಗಿದ್ದು ಬ್ಯಾಂಕಿನ ಬಲವರ್ಧನೆಯಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ರಂಗದಲ್ಲಿ ಅಜಾತಶತ್ರು ಆಗಿದ್ದ ಅವರ ನಿಧನಕ್ಕೆ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಂತಾಪ ಸೂಚಿಸಿದ್ದಾರೆ.
Related Articles
Advertisement
ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟು ಮುಚ್ಚಿ ಸಂತಾಪ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಕರಾಯ ಗ್ರಾಮದ ಕಲ್ಲೇರಿ ಪೇಟೆ ಸಹಿತ ಸಹಕಾರಿ ಸಂಸ್ಥೆಯವರು, ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಸಂತಾಪ ವ್ಯಕ್ತಪಡಿಸಿದರು.