Advertisement

ಲಂಡನ್‌ನಲ್ಲಿ ನೀರವ್‌ ಮೋದಿ ಅರೆಸ್ಟ್‌; ಕೋರ್ಟ್‌ ಮುಂದೆ ಹಾಜರು

10:29 AM Mar 20, 2019 | Team Udayavani |

ಹೊಸದಿಲ್ಲಿ : ಪಂಜಾಬ್‌ ನ್ಯಾಶನಲ್‌ ಬ್ಯಾಂಕಿಗೆ 13,500 ಕೋಟಿ ರೂ. ವಂಚಿಸಿ ವಿದೇಶಕ್ಕೆ ಪಲಾಯನಗೈದಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ನೀರವ್‌ ಮೋದಿಯನ್ನು ಲಂಡನ್‌ನಲ್ಲಿ ಬಂಧಿಸಲಾಗಿದೆ; ಆತನನ್ನು ಇಂದು ಅಲ್ಲಿನ ಕೋರ್ಟಿನಲ್ಲಿ ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 

Advertisement

ಲಂಡನ್‌ನ ವೆಸ್ಟ್‌ಮಿನ್‌ಸ್ಟರ್‌ ಮ್ಯಾಜಿಸ್ಟ್ರೇಟರು ಹೊರಡಿಸಿದ ವಾರಂಟ್‌ ಪ್ರಕಾರ ನೀರವ್‌ ಮೋದಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಪಿಎನ್‌ಬಿ ಬಹು ಸಹಸ್ರ ಕೋಟಿ ವಂಚನೆ ಹಗರಣ ಬೆಳಕಿಗೆ ಬರುತ್ತಲೇ ನೀರವ್‌ ಮೋದಿ ಕಳೆದ ವರ್ಷ ವಿದೇಶಕ್ಕೆ ಪಲಾಯನ ಮಾಡಿದ್ದ. ಆತನ ವಿರುದ್ಧ ಕಳೆದ ವರ್ಷ ಜೂನ್‌ ನಲ್ಲೇ ಇಂಟರ್‌ ಪೋಲ್‌ ರೆಡ್‌ ಕಾರ್ನರ್‌ ನೊಟೀಸ್‌ ಜಾರಿ ಮಾಡಿತ್ತು. 

ಈ ನಡುವೆ ಬಂಧಿತ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಬೇಕೆಂಬ ಕೋರಿಕೆಯನ್ನು ವಿದೇಶ ವ್ಯವಹಾರಗಳ ಸಚಿವಾಲಯ ಬ್ರಿಟನ್‌ ಸರಕಾರಕ್ಕೆ ಈಗಾಗಲೇ ಸಲ್ಲಿಸಿದೆ.  

Advertisement

Udayavani is now on Telegram. Click here to join our channel and stay updated with the latest news.

Next