Advertisement

ಬಹುಕೋಟಿ ವಂಚನೆ: ನೀರವ್ ಮೋದಿ ಭಾರತಕ್ಕೆ ಗಡಿಪಾರು ಮಾಡಲು ಬ್ರಿಟನ್ ಅಂಕಿತ

06:31 PM Apr 16, 2021 | Team Udayavani |

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿದ್ದ ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡಲು ಬ್ರಿಟನ್ ಸರ್ಕಾರ ಅಂಕಿತ ಹಾಕಿರುವುದಾಗಿ ವರದಿ ತಿಳಿಸಿದೆ. ನೀರವ್ ಮೋದಿ ಗಡಿಪಾರು ಆದೇಶಕ್ಕೆ ಬ್ರಿಟನ್ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಸಹಿ ಹಾಕಿರುವುದಾಗಿ ವರದಿ ವಿವರಿಸಿದೆ.

Advertisement

ಗಡಿಪಾರಿಗೆ ಸಂಬಂಧಿಸಿದಂತೆ ನೀರವ್ ಮೋದಿ(50ವರ್ಷ) ಕಾನೂನು ಹೋರಾಟ ನಡೆಸಬಹುದಾಗಿದ್ದು, ಆದೇಶದ ವಿರುದ್ಧವಾಗಿ 28 ದಿನದೊಳಗೆ ಬ್ರಿಟನ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ.

ಗಡಿಪಾರು ಆದೇಶ ಕುರಿತು ನ್ಯಾಯಾಲದ ಮೊರೆ ಹೋದಲ್ಲಿ ಇದು ತಿಂಗಳುಗಟ್ಟಲೇ ಅಥವಾ ಒಂದು ವರ್ಷ ಕಾಲಾವಧಿ ತೆಗೆದುಕೊಳ್ಳಬಹುದು ಎಂದು ವರದಿ ಹೇಳಿದೆ. ಮದ್ಯದ ಉದ್ಯಮಿ ವಿಜಯ್ ಮಲ್ಯ ಕೂಡಾ 2019ರಲ್ಲಿ ಭಾರತಕ್ಕೆ ಗಡಿಪಾರು ಮಾಡಲು ಸಹಿ ಹಾಕಿದ್ದು, ಇದರ ವಿರುದ್ಧ ನ್ಯಾಯಾಲಯದ ಮೊರೆ ಹೋದ ಪರಿಣಾಮ ಇನ್ನೂ ಅಂತಿಮ ತೀರ್ಪು ಹೊರಬಿದ್ದಿಲ್ಲ.

ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 14 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿದ್ದು, ಭಾರತದಿಂದ ಪರಾರಿಯಾಗಿ ಬ್ರಿಟನ್ ನಲ್ಲಿ ತಲೆಮರೆಯಿಸಿಕೊಂಡಿದ್ದ. ನೀರವ್ ಮೋದಿಯನ್ನು ಗಡಿಪಾರು ಮಾಡಬೇಕೆಂದು ಭಾರತ ಬ್ರಿಟನ್ ಗೆ ಮನವಿ ಮಾಡಿಕೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next