ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಅಕ್ಷಯ್ ಥಾಕೂರ್ ಇಂದು ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದಾನೆ ಎಂದು ವರದಿಯಾಗಿದೆ.
ಪ್ರಕರಣದ ಮತ್ತೋರ್ವ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಶನಿವಾರ ಬೆಳಿಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದರು. ಇದಾದ ಕೆಲವೇ ವೇಳೆಯಲ್ಲಿ ಅಕ್ಷಯ್ ಥಾಕೂರ್ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ ಎಂದು ವರದಿಯಾಗಿದೆ.
2012ರ ಡಿಸೆಂಬರ್ 16ರಂದು ದೆಹಲಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯನ್ನು ನಾಲ್ವರು ಚಲಿಸುತ್ತಿದ್ದ ಬಸ್ ನಲ್ಲಿ ಅತ್ಯಾಚಾರ ನಡೆಸಿದ್ದರು. ಸದ್ಯ ನಾಲ್ವರು ಆರೋಪಿಗಳಾದ ಮುಖೇಶ್ ಸಿಂಗ್, ಪವನ್ ಕುಮಾರ್ ಗುಪ್ತಾ, ಅಕ್ಷಯ್ ಥಾಕೂರ್ ಮತ್ತು ವಿನಯ್ ಶರ್ಮಾಗೆ ಗಲ್ಲು ಶಿಕ್ಷೆಗೆ ಆದೇಶಿಸಲಾಗಿದೆ.
ಶನಿವಾರ ಬೆಳಿಗ್ಗೆ ಗಲ್ಲು ಶಿಕ್ಷೆ ನೀಡುವಂತೆ ಜಾರಿಯಾಗಿದ್ದ ಡೆತ್ ವಾರೆಂಟ್ ಗೆ ಪಟಿಯಾಲ ಹೌಸ್ ಕೋರ್ಟ್ ತಡೆಯಾಜ್ಷೆ ನೀಡಿದೆ.
ಅಪರಾಧಿಗಳಾದ ಮುಖೇಶ್ ಸಿಂಗ್ ಮತ್ತು ವಿನಯ್ ಶರ್ಮಾ ಅವರು ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ಧಾರೆ.