Advertisement
ನಿರ್ಭಯಾ ಪ್ರಕರಣದ ನಾಲ್ವರಲ್ಲಿ ಒಬ್ಬ ಅಪರಾಧಿ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಜನವರಿ 22ರಂದು 7ಗಂಟೆಗೆ ಅಪರಾಧಿಗಳನ್ನು ಗಲ್ಲಿಗೇರಿಸಬಾರದು ಎಂದು ದಿಲ್ಲಿ ಸರ್ಕಾರ ಬುಧವಾರ ಹೈಕೋರ್ಟ್ ಗೆ ತಿಳಿಸಿದೆ.
Related Articles
Advertisement
ಮತ್ತೊಂದೆಡೆ ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮುಖೇಶ್ ಸಿಂಗ್ ನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಕ್ಷಣವೇ ವಜಾಗೊಳಿಸಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಭಾಯಿಜಲ್ ಅವರಿಗೆ ಕಳುಹಿಸಬೇಕೆಂದು ತಿಳಿಸಿದ್ದಾರೆ. ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಮಿಂಚಿನ ವೇಗದಲ್ಲಿ ತಿರಸ್ಕರಿಸಬೇಕಾಗಿದೆ ಎಂದು ಸಿಸೋಡಿಯಾ ತಿಳಿಸಿದ್ದಾರೆ.
ಕ್ಷಮಾದಾನ ಅರ್ಜಿ ಇತ್ಯರ್ಥವಾಗುವವರೆಗೆ ತಿಹಾರ್ ಜೈಲು ಅಧಿಕಾರಿಗಳು ಡೆತ್ ವಾರಂಟ್ ಜಾರಿಗೊಳಿಸಲು ಕಾಯಬೇಕಾಗುತ್ತದೆ. ಅಪರಾಧಿಗಳ ಗಲ್ಲುಶಿಕ್ಷೆ ಕೊನೆಗೂ ಜಾರಿಯಾಗುವುದು ರಾಷ್ಟ್ರಪತಿ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿದ ನಂತರ ಎಂದು ದಿಲ್ಲಿ ಸರ್ಕಾರದ ಪರ ವಕೀಲ ರಾಹುಲ್ ಮೆಹ್ರಾ ಹೇಳಿದ್ದಾರೆ.