Advertisement

ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಮನಮೋಹನ್ ಸಿಂಗ್ ಭೇಟಿಯಾದ ನಿರ್ಮಲಾ ಸೀತಾರಾಮನ್

10:01 AM Jun 28, 2019 | Team Udayavani |

ನವದೆಹಲಿ:ಕೇಂದ್ರ ಬಜೆಟ್ ಮಂಡಿಸುವ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಗಳಿಸುವ ಮೂಲಕ 2ನೇ ಬಾರಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆಗೆ ಏರಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ವಿತ್ತ ಸಚಿವೆಯಾಗಿ ಅಧಿಕಾರದ ಸ್ವೀಕಾರಿಸಿದ ಬಳಿಕ ಮೊದಲ ಬಾರಿಗೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಜುಲೈ 5ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ.

1991ರಲ್ಲಿ ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಹಣಕಾಸು ಸಚಿವರಾಗಿದ್ದು, ಆ ಸಂದರ್ಭದಲ್ಲಿ ಆರ್ಥಿಕ ಸುಧಾರಣೆಗೆ ಕೈಗೊಂಡ ಘೋಷಣೆಗಳು ಎಲ್ಲೆಡೆ ಗುರುತಿಸುವಂತೆ ಮಾಡಿತ್ತು.

ಇದೊಂದು ಸೌಜನ್ಯಯುತವಾದ ಭೇಟಿಯಾಗಿದೆ. ವಿತ್ತ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಿರ್ಮಲಾ ಸೀತಾರಾಮನ್ ಅವರು ಸಿಂಗ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ವಿತ್ತ ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next