Advertisement
ನಗರದ ಹೋಟೆಲ್ ತಾಜ್ ವೆಸ್ಟೆಂಡ್‍ನಲ್ಲಿ ಬಿಜೆಪಿ ಆರ್ಥಿಕ ಪ್ರಕೋಷ್ಠ ಏರ್ಪಡಿಸಿದ್ದ “ಆರ್ಥಿಕ ಅವಲೋಕನ, ಆತ್ಮವಿಶ್ವಾಸದ ಭಾರತಕ್ಕಾಗಿ ಆತ್ಮನಿರ್ಭರ ಬಜೆಟ್” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಜ್ವಲ, ಉಜಾಲಾ, ಸ್ವನಿಧಿ, ಮುದ್ರಾ, ಜನೌಷಧಿ, ಕಿಸಾನ್ ಸಮ್ಮಾನ್‍ನಂಥ ಯೋಜನೆಗಳ ಮೂಲಕ ಕೇಂದ್ರದ ಬಿಜೆಪಿ ಸರಕಾರವು ಬಡವರ ಸಮಸ್ಯೆಗಳನ್ನು ನಿವಾರಿಸಲು ಆದ್ಯತೆ ಕೊಟ್ಟಿದೆ ಎಂದು ವಿವರಿಸಿದರು.
Related Articles
Advertisement
ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆದಾರರ ಮೇಲೆ ನಂಬಿಕೆ ಇಡುವ ಮತ್ತು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಚಿಂತನೆಯಡಿ ದೇಶದ ಅಭಿವೃದ್ಧಿಗೆ ಬದ್ಧತೆ ತೋರುವ ಸರಕಾರ ನಮ್ಮದು. ಉದ್ಯೋಗ ಹೆಚ್ಚಿಸುವ ಮೂಲಸೌಕರ್ಯಕ್ಕೆ ಆದ್ಯತೆ ನೀಡಿ ಸುಸ್ಥಿರ ಪ್ರಗತಿ ನಮ್ಮದಾಗಿಸಲು ಸರಕಾರ ಮುಂದಾಗಿದೆ. ಉತ್ತಮವಾಗಿ ಕಾರ್ಯ ನಿರ್ವಹಿಸದೆ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸಲು ಮತ್ತು ದೇಶದ ಅಭಿವೃದ್ಧಿ ಸಾಧಿಸಲು ಖಾಸಗೀಕರಣ ಅನಿವಾರ್ಯ ಎಂದು ಅವರು ತಿಳಿಸಿದರು.
ದೀರ್ಘಾವಧಿ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಜವಾಬ್ದಾರಿಯುತ ಚಿಂತನೆಯ ಬಜೆಟ್ ಅನ್ನು ನೀಡಲಾಗಿದೆ ಎಂದು ಅವರು ವಿಶ್ಲೇಷಿಸಿದರು. ಬಳಿಕ ಸಂವಾದದಲ್ಲೂ ಪಾಲ್ಗೊಂಡ ಅವರು, ಸಮಸ್ಯೆಗಳಿದ್ದರೆ ಅವುಗಳನ್ನು ನನ್ನ ಗಮನಕ್ಕೆ ತನ್ನಿ. ಅವುಗಳನ್ನು ಗಮನಿಸಿ ಪರಿಹರಿಸುವೆ ಎಂದು ತಿಳಿಸಿದರು.
ಆರ್ಥಿಕ ಪ್ರಕೋಷ್ಠದ ಸಂಚಾಲಕರಾದ ಶ್ರೀ ಸಮೀರ್ ಕಾಗಲ್ಕರ್, ಪ್ರಕೋಷ್ಠದ ಸಲಹೆಗಾರರಾದ ಶ್ರೀ ವಿಶ್ವನಾಥ ಭಟ್, ಸಹ ಸಂಚಾಲಕರಾದ ಶ್ರೀ ಕರಣ್ ಜವಾಜೆ, ಆಹ್ವಾನಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.