ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ದಿನಕ್ಕೊಂದು ರೀತಿಯ ಬೆಳವಣಿಗೆಗಳು ನಡೆಯುತ್ತಿದೆ. ಬಿಹಾರ ಪೊಲೀಸರ ತಂಡ ಮುಂಬೈಗೆ ಆಗಮಿಸಿದ ಬಳಿಕ ಹಲವು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿದೆ. ಈ ಮಧ್ಯೆ ಸುಶಾಂತ್ ಸಾವು ಪ್ರಕರಣದ ತನಿಖೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಸಿಬಿಐಗೆ ಶಿಫಾರಸ್ಸು ಮಾಡಿದ್ದಾರೆ.
ಸುಶಾಂತ್ ಸಿಂಗ್ ತಂದೆ ಕೆಕೆ ಸಿಂಗ್ ಇಂದು ಬಿಹಾರ ಡಿಜಿಪಿ ಅವರನ್ನು ಭೇಟಿಯಾಗಿದ್ದರು. ಸುಶಾಂತ್ ಸಿಂಗ್ ಅವರ ತಂದೆ ಸಿಬಿೈ ತನಿಖೆಗೆ ಒತ್ತಾಯಿಸದ್ದಾರೆ. ಈ ಹಿನ್ನಲೆಯಲ್ಲಿ ನಾನು ಶಿಫಾರಸ್ಸು ಮಾಡುತ್ತೇನೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಮಗನ ಸಾವಾಗಿ 40 ದಿನಗಳಾದರೂ ಮುಂಬೈ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಕೆಕೆ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಅವರು ಪಾಟ್ನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಸದ್ಯ ಬಿಹಾರ ಪೊಲೀಸರ ತಂಡ ಮುಂಬೈನಲ್ಲಿ ತನಿಖೆ ನಡೆಸುತ್ತಿದೆ. ಸುಶಾಂತ್ ಖಾತೆಯಿಂದ ಕೋಟ್ಯಾಂತರ ರೂ. ಹಣ ವರ್ಗಾವಣೆ ಕುರಿತು ಜಾರಿ ನಿರ್ದೇಶನಾಲಯವೂ ತನಿಖೆ ನಡೆಸುತ್ತಿದೆ.