ಬೆಂಗಳೂರು: “ನಿತ್ಯಾನಂದ ಪ್ರಪಂಚ ತ್ಯಜಿಸಿದ್ದಾರೆ ಎಂದು ಬಿಡದಿಯ ನಿತ್ಯಾನಂದ ಧ್ಯಾನ ಪೀಠದಿಂದ ಇ-ಮೇಲ್ ಬಂದಿದೆ. ನಿತ್ಯಾನಂದ ಎಲ್ಲಿದ್ದಾರೆ ಎಂದು ಆಶ್ರಮದವರಿಗೂ ಮಾಹಿತಿ ಇಲ್ಲ’ ಸರ್ಕಾರ ಹೈಕೋರ್ಟ್‌ಗೆ ಹೇಳಿದೆ.
ತಮ್ಮ ಪುತ್ರ ಕೃಷ್ಣಕು ಮಾರ್ ಪಾನ್ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ರಾಜ್ಯದ ರಾಂಚಿಯ ದಯಾಶಂಕರ್ ಪಾಲ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ಯು ನ್ಯಾ.ಕೆ. ಸೋಮ ಶೇಖರ್, ನ್ಯಾ.ಉಮೇಶ್ ಎಂ.ಅಡಿಗ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎ.ಬೆಳ್ಳಿಯಪ್ಪ, ನಿತ್ಯಾನಂದ ಧ್ಯಾನ ಪೀಠದಲ್ಲಿ ಕೃಷ್ಣಕುಮಾರ್ ಪಾಲ್ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಅರ್ಜಿಯಲ್ಲಿ ಮೂರನೇ ಪ್ರತಿವಾದಿ ಯಾಗಿರುವ ಬಿಡದಿಯ ನಿತ್ಯಾನಂದ ಧ್ಯಾನ ಪೀಠ ದಿಂದ ನಿತ್ಯಾನಂದ ಅವರು ಪ್ರಪಂಚ ತ್ಯಜಿಸಿದ್ದಾರೆ ಎಂದು ಇ-ಮೇಲ್ ಬಂದಿದೆ.
ನಿತ್ಯಾನಂದ ಎಲ್ಲಿದ್ದಾರೆ ಎಂದು ಆಶ್ರಮದವರಿಗೂ ಮಾಹಿತಿ ಇಲ್ಲ ಎಂದು ತಿಳಿಸಿದರು. ಇದನ್ನು ಆಲಿಸಿದ ನ್ಯಾಯಪೀಠ ಸಮಗ್ರ ವರದಿ ನೀಡುವಂತೆ ಸೂಚಿಸಿತು. ಕೈಲಾಸ ದೇಶದಲ್ಲಿ ನ್ಯಾಯಾಧೀಶ ಯಾರು?: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ, ಅರ್ಜಿದಾರರ ಪರ ವಕೀಲ ರಾಜಕುಮಾರ್ ಅವರು ನಿತ್ಯಾನಂದ ಕೈಲಾಸದಲ್ಲಿದ್ದಾರೆ ಎಂದರು.
ಅದಕ್ಕೆ ಕೈಲಾಸ ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ನ್ಯಾಯಾಧೀಶರ ಯಾರೆಂದು ಹಾಸ್ಯದ ಧಾಟಿಯಲ್ಲಿ ಪ್ರಶ್ನಿಸಿದ ನ್ಯಾಯಪೀಠ, ನಿತ್ಯಾನಂದ ಎಲ್ಲಿದ್ದಾರೆ ಎಂಬ ಮಾಹಿತಿ ಕೊಟ್ಟರೆ ನಾವು ಅಲ್ಲಿಗೆ ಪ್ರೊಸಸ್ ಕೊಡುತ್ತೇವೆ. ಕೈಲಾಸ ದೇಶದಲ್ಲಿ ಸಾಂವಿಧಾನಿಕ ನ್ಯಾಯಾಧೀಶರು ಯಾರು? ಅಲ್ಲಿ ಸ್ವಾಮಿ ಇದ್ದಾನೆ ಎಂದು ನೀವು ಹೇಳಿದ ಮೇಲೆ ಅದರ ಮಾಹಿತಿ ಕೊಡಿ. ಅದು ನಿಮ್ಮ ಕರ್ತವ್ಯ. ನ್ಯಾಯಾಲಯಕ್ಕೆ ಸಹಾಯ ಮಾಡುವುದು ಎಂದರೆ ನಿತ್ಯಾನಂದನ ಮಾಹಿತಿ ನೀಡುವುದಾಗಿದೆ. ಅವರು ಕೈಲಾಸದಲ್ಲಿ ಕಿಂಗ್ ಆಫ್ ಕಿಂಗ್ ಎಂದು ಚಟಾಕಿ ಹಾರಿಸಿದರು.