Advertisement

ಮೈಸೂರು ದಸರಾಕ್ಕೆ ಚಾಲನೆ ನೀಡಿದ ನಿತ್ಯೋತ್ಸವ ಕವಿ 

09:11 AM Sep 21, 2017 | |

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಹತ್ತು ದಿನಗಳ 407ನೇ  ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಬೆಳಗ್ಗೆ 8.45ರ ತುಲಾ ಲಗ್ನದಲ್ಲಿ ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಅವರು ಚಾಲನೆ ನೀಡಿದ್ದಾರೆ. 

Advertisement

ಈ ವೇಳೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಎಚ್‌ .ಸಿ.ಮಹದೇವಪ್ಪ, ತನ್ವೀರ್ ಸೇಠ್, ಉಮಾಶ್ರೀ, ಪ್ರಿಯಾಂಕ ಖರ್ಗೆ, ರುದ್ರಪ್ಪ ಮಾನಪ್ಪ ಲಮಾಣಿ,ವಿಧಾನ ಪರಿಷತ್‌ ಉಪ ಸಭಾಪತಿ ಮರಿತಿಬ್ಬೇಗೌಡ ಉಪಸ್ಥಿತರಿದ್ದರು. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದಾರೆ. 

ಕಾರ್ಯ ಕ್ರಮಕ್ಕಾಗಿ ಚಾಮುಂಡಿಬೆಟ್ಟದಲ್ಲಿ ದೇವಸ್ಥಾನದ ಹೊರ ಆವರಣದಲ್ಲಿ ವಿಶಾಲವಾದ ಪೆಂಡಾಲ್‌ ಹಾಕಲಾಗಿದ್ದು, ಸುಮಾರು ಒಂದು ಸಾವಿರ ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

 ಮೈಸೂರು ನಗರ ಕತ್ತಲಾಗುತ್ತಿದ್ದಂತೆ ವಿದ್ಯುತ್‌ ದೀಪಾಲಂಕಾರದಿಂದ ಜಗಮಗಿಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next