ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಇದರೊಂದಿಗೆ ಕಳೆದ ನಾಲ್ಕು ತಿಂಗಳಲ್ಲಿ ಬಂದಿರುವ ಎರಡನೇ ಬೆದರಿಕೆ ಕರೆ ಇದಾಗಿದೆ ಎನ್ನಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಿವಾಸಕ್ಕೆ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ, ಕರೆ ಸ್ವೀಕರಿಸಿದ ಸಿಬ್ಬಂದಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕರೆ ಮಾಡಿದ ವ್ಯಕ್ತಿಯ ಪತ್ತೆಗೆ ಬಲೆ ಬಿಸಿದ್ದಾರೆ.
ಸಿಬ್ಬಂದಿಯ ಹೇಳಿಕೆಯಂತೆ ಕರೆ ಮಾಡಿದವರು ಹಿಂದಿಯಲ್ಲಿ ಮಾತನಾಡುತ್ತಾ ‘ಮುಝೆ ಮಂತ್ರಿ ಜೀ ಸೇ ಬಾತ್ ಕರ್ನಿ ಹೈ, ಉನ್ಹೆ ಥ್ರೆಟೆನ್ ಕರ್ನಾ ಹೈ’ (ನಾನು ಸಚಿವರೊಂದಿಗೆ ಮಾತನಾಡಬೇಕು, ಅವರಿಗೆ ಬೆದರಿಕೆ ಹಾಕಬೇಕು) ಎಂದು ಹೇಳಿ ಕರೆಯನ್ನು ಕಡಿತಗೊಳಿಸಿದ್ದಾನೆ” ಎಂದು ಹೇಳಿದ್ದಾರೆ.
ಇದೆ ರೀತಿ ಜನವರಿಯಲ್ಲೂ ಕರೆ ಬಂದಿತ್ತು, ತನಿಖೆ ನಡೆಸಿದ ವೇಳೆ ಬೆಳಗಾವಿಯ ಹಿಂಡಲಗಾ ಸೆಂಟ್ರಲ್ ಜೈಲಿನ ಕೈದಿಯಿಂದಲೇ ಈ ಜೀವ ಬೆದರಿಕೆ ಕರೆ ಹೋಗಿತ್ತು ಎಂಬುದು ಗೊತ್ತಾಗಿದೆ. ಈ ಸಂಬಂಧ ಶಂಕಿತ ಆರೋಪಿಯನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು.