ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಅನ್ನು ನಿಷೇಧಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಶುಕ್ರವಾರ (ಜುಲೈ 08) ತಿಳಿಸಿದ್ದಾರೆ.
ಇದನ್ನೂ ಓದಿ:ಓಟಿಟಿ ವೇದಿಕೆಯಲ್ಲೂ ಪ್ರಸಾರವಾಗಲಿದೆ ರಕ್ಷಿತ್ ಶೆಟ್ಟಿ ”ಚಾರ್ಲಿ 777″
ಗಡ್ಕರಿ ಹೇಳಿಕೆಯನ್ನು ಉಲ್ಲೇಖಿಸಿ ವರದಿಯಾಗಿರುವಂತೆ, ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಕೆ ಮಾಡಲಾಗುತ್ತಿದೆ. ಗ್ರೀನ್ ಹೈಡ್ರೋಜನ್ (ಹಸಿರು ಜಲಜನಕ) ಅನ್ನು ಕೂಡಾ ತಯಾರಿಸಬಹುದಾಗಿದ್ದು, ಇದನ್ನು ಪ್ರತಿ ಕೆಜಿಗೆ 70 ರೂಪಾಯಿಗೆ ಮಾರಾಟ ಮಾಡಬಹುದು. ಇನ್ನು ಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್ ಅಭಾವ ತಲೆದೋರಲಿದ್ದು, ಈ ನಿಟ್ಟಿನಲ್ಲಿ ದೇಶದಲ್ಲಿ ಪೆಟ್ರೋಲ್ ನಿಷೇಧಿಸಿ ಹಸಿರು ಹೈಡ್ರೋಜನ್ ಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ರೈತರು ಕೇವಲ ಆಹಾರ ಪೂರೈಕೆ ಮಾಡುವುದಲ್ಲ, ಜತೆಗೆ ಇಂಧನ ಪೂರೈಕೆದಾರರಾಗುವ ಅಗತ್ಯವಿದೆ ಎಂದು ನಿತಿನ್ ಗಡ್ಕರಿ ಹೇಳಿದರು. ಕೇವಲ ಜೋಳ, ಭತ್ತ, ಗೋಧಿ ಬೆಳೆಯುವ ಮೂಲಕ ಯಾವ ರೈತನೂ ತನ್ನ ಭವಿಷ್ಯದಲ್ಲಿ ಬದಲಾವಣೆ ಕಾಣಲು ಸಾಧ್ಯವಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ಅಕೋಲಾದಲ್ಲಿ ಡಾ. ಪಂಜಾಬ್ರಾವೊ ದೇಶಮುಖ್ ಕೃಷಿ ವಿದ್ಯಾಪೀಠದಿಂದ ನಿತಿನ್ ಗಡ್ಕರಿ ಅವರಿಗೆ “ಡಾಕ್ಟರ್ ಆಫ್ ಸೈನ್ಸ್” ಪದವಿ ಪ್ರಧಾನ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಅವರು ಮೇಲಿನ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.