ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಧಿಕಾರದಲ್ಲಿ ಉಳಿಯುವ ಮಹದಾಸೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಪಾದಗಳನ್ನು ಮುಟ್ಟಿ ಬಿಹಾರಕ್ಕೆ ಅಪಮಾನ ಎಸಗಿದ್ದಾರೆ ಎಂದು ರಾಜಕೀಯ ತಂತ್ರಜ್ಞ-ರಾಜಕಾರಣಿ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ.
ಶುಕ್ರವಾರ ಜನ್ ಸೂರಜ್ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಕಿಶೋರ್, ನಿತೀಶ್ ಕುಮಾರ್ ಮನಸ್ಸು ಮಾಡಿದ್ದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬರುತ್ತಿರಲಿಲ್ಲ ಆದರೆ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಿತೀಶ್ ಕುಮಾರ್ ಅವರು ಮೋದಿ ಸರಕಾರಕ್ಕೆ ಬೆಂಬಲ ನೀಡಿ ಅವರ ಕಾಲಿಗೆ ಎರಗಿದ್ದಾರೆ ಆದರೆ ಇದು ಒಳ್ಳೆಯ ವ್ಯವಸ್ಥೆ ಅಲ್ಲ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಪ್ರಮಾಣ ವಚನಕ್ಕೂ ಮುನ್ನ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ನಿತೀಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಟೀಕಿಸಿದ ಕಿಶೋರ್ ಒಂದು ಕಾಲದಲ್ಲಿ ನಾನು ನಿತೀಶ್ ಕುಮಾರ್ ಜೊತೆ ಕೆಲಸ ಮಾಡಿದ್ದೇನೆ ಆದರೆ ಅಂದಿನ ಅವರ ನಿತೀಶ್ ಕುಮಾರ್ ಗೂ ಇಂದಿನ ನಿತೀಶ್ ಕುಮಾರ್ ಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.
ನಿತೀಶ್ ಕುಮಾರ್ ಅವರು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮೋದಿ ಅವರ ಬೆಂಬಲಕ್ಕೆ ನಿಂತಿರುವುದು ನಿಜಕ್ಕೂ ಬೇಸರದ ವಿಚಾರ ಅವರು ರಾಜ್ಯದ ಅಭಿವೃದ್ಧಿಯಾ ಬಗ್ಗೆ ಚಿಂತೆ ಇಲ್ಲ ಬದಲಾಗಿ ತನ್ನ ಸ್ಥಾನ ಗಟ್ಟಿಗೊಳಿಸಲು ಅವರ ಉದ್ದೇಶವಾಗಿದೆ ಎಂದು ದೂರಿದರು.
ಇದನ್ನೂ ಓದಿ: Bollywood: ʼಚಂದು ಚಾಂಪಿಯನ್ʼಗೆ ಪಾಸಿಟಿವ್ ರೆಸ್ಪಾನ್ಸ್: ಮೊದಲ ದಿನ ಗಳಿಸಿದ್ದೆಷ್ಟು?