Advertisement

Bihar ಮತ್ತೆ ಎನ್‌ಡಿಎಗೆ ಮರಳುವ ಪ್ರಶ್ನೆಯೇ ಇಲ್ಲ;  ಸಿಎಂ ನಿತೀಶ್ ಕುಮಾರ್

04:49 PM Sep 25, 2023 | Team Udayavani |

ಪಾಟ್ನಾ: ಜೆಡಿಯು ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳುವ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

Advertisement

ಎನ್‌ಡಿಎಗೆ ಮರಳುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕ್ಯಾ ಫಾಲ್ತು ಬಾತ್ ಹೈ” , ಒಂದು ವರ್ಷದ ಹಿಂದೆಯೇ ನಾವು ಎನ್ ಡಿಎ ಜೊತೆಗಿನ ತನ್ನ ಸಂಬಂಧವನ್ನು ಮುರಿದುಕೊಂಡಿದ್ದು, ಈಗ ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸುವುದೇ ತಮ್ಮ ಗುರಿ ಎಂದು ಹೇಳಿದರು.

ಬಿಜೆಪಿ-ವಿರೋಧಿ ಇಂಡಿಯಾ ಮೈತ್ರಿಕೂಟದ ಪ್ರಮುಖ ವ್ಯಕ್ತಿಯಾಗಿರುವ ಜೆಡಿಯು ನಾಯಕ ನಿತೀಶ್ ಅವರು, ತಮ್ಮ ಪಕ್ಷದ ಸಹೋದ್ಯೋಗಿಗಳು ತಾವು “ಒಳ್ಳೆಯ ಪ್ರಧಾನಿಯಾಗುವ ಎಲ್ಲಾ ಗುಣಗಳನ್ನು” ಹೊಂದಿದ್ದಾರೆ ಎಂದು ಮಾತನಾಡುವುದರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು.

ಇಂತಹ ಹೇಳಿಕೆಗಳನ್ನು ನೀಡಬೇಡಿ ಎಂದು ನಾನು ಈಗಾಗಲೇ ನನ್ನ ಪಕ್ಷದ ಸಹೋದ್ಯೋಗಿಗಳಿಗೆ ಹೇಳಿದ್ದೇನೆ, ಇಂಡಿಯಾ ಮೈತ್ರಿಕೂಟದ ಏಕತೆಯನ್ನು ಬಲಪಡಿಸುವುದು ನನ್ನ ಏಕೈಕ ಆಶಯವಾಗಿದೆ, ನಾನು ಈ ದಿಕ್ಕಿನಲ್ಲಿ ಮಾತ್ರ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಬಿಹಾರ ವಿಧಾನಸಭೆಯ ಉಪ ಸ್ಪೀಕರ್ ಮತ್ತು ಹಿರಿಯ ಜೆಡಿಯು ನಾಯಕ ಮಹೇಶ್ವರ್ ಹಜಾರಿ ಅವರು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಲು ನಿತೀಶ್ ಕುಮಾರ್‌ಗಿಂತ ಸಮರ್ಥ ನಾಯಕ ಮತ್ತೊಬ್ಬರಿಲ್ಲ ಎಂದು ಹೇಳಿದ್ದರು.

Advertisement

ಸಚಿವ ಸಂಪುಟ ವಿಸ್ತರಣೆಯ ಸಾಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿತೀಶ್ ಕುಮಾರ್, ಈ ಪ್ರಶ್ನೆಯನ್ನು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಗೆ ಕೇಳಿ ಎಂದು ಹೇಳಿ ಚೆಂಡನ್ನು ಅವರ ಅಂಗಳಕ್ಕೆ ತಳ್ಳಿದರು.

ಇತ್ತೀಚೆಗೆ ಲೋಕಸಭೆಯಲ್ಲಿ ಬಿಎಸ್‌ಪಿ ಶಾಸಕ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿತೀಶ್ , “ಈ ವಿಷಯ ಬಿಡಿ. ನಮ್ಮ ಸರ್ಕಾರ ಸಮಾಜದ ಎಲ್ಲಾ ವರ್ಗಗಳ ಒಳಿತಿಗಾಗಿ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next