Advertisement

ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್ ಕುಮಾರ್

07:24 PM Sep 05, 2022 | Team Udayavani |

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಇಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಉಭಯ ನಾಯಕರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಪ್ರತಿಪಕ್ಷಗಳ ಒಗ್ಗಟ್ಟಿನ ಖಾತ್ರಿಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

ಕುಮಾರ್ ಬಿಹಾರದಲ್ಲಿ ಎನ್‌ಡಿಎಯಿಂದ ಹೊರನಡೆದ ನಂತರ ಮತ್ತು ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಮಹಾಘಟಬಂಧನ್ ಸರ್ಕಾರವನ್ನು ರಚಿಸಿದ ನಂತರ ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿದೆ.

ನಿತೀಶ್ ಸೋಮವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದು, ಎನ್‌ಸಿಪಿಯ ಸರದ್ ಪವಾರ್, ಎಎಪಿಯ ಅರವಿಂದ್ ಕೇಜ್ರಿವಾಲ್ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ಕುಮಾರಸ್ವಾಮಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಎಡಪಕ್ಷಗಳ ನಾಯಕರು ಸೇರಿದಂತೆ ಹಲವು ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವನ್ನು ನಿತೀಶ್ ಕುಮಾರ್ ಮಾಡುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next