ಪಾಟ್ನಾ: ಬಿಹಾರದಲ್ಲಿನ ನಾಟಕೀಯ ರಾಜಕೀಯ ಬೆಳವಣಿಗೆಯ ನಡುವೆಯೇ ನಿತೀಶ್ ಕುಮಾರ್ ಮಂಗಳವಾರ (ಆಗಸ್ಟ್ 09) ಸಂಜೆ ರಾಜ್ಯಪಾಲ ಫಗು ಚೌಹಾಣ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಜೆಡಿಯು, ಬಿಜೆಪಿ ಮೈತ್ರಿ ಸರ್ಕಾರ ಪತನಗೊಂಡತಾಗಿದೆ.
ಇದನ್ನೂ ಓದಿ:ಚಾಮರಾಜನಗರ: ಜನ್ಮದಿನದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ
ಆರ್ ಜೆಡಿ ಶಾಸಕ ತೇಜಸ್ವಿ ಯಾದವ್ ಜತೆಗೂಡಿ ರಾಜಭವನಕ್ಕೆ ಆಗಮಿಸಿ ರಾಜೀನಾಮೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ. ಇಂದು ನಿತೀಶ್ ಕುಮಾರ್ ಪಕ್ಷದ ಶಾಸಕರ ಜತೆ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.
ಬಿಹಾರದಲ್ಲಿ 2017ರಲ್ಲಿಯೂ ಕೂಡಾ ಆರ್ ಜೆಡಿ ಸಖ್ಯ ತೊರೆದು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ರಾತ್ರೋರಾತ್ರಿ ಜೆಡಿಯು ಹೊಸ ಸರ್ಕಾರ ರಚಿಸಿತ್ತು. ಇದೀಗ ಮತ್ತೆ ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡು ಮತ್ತೆ ಆರ್ ಜೆಡಿ ಜತೆ ಕೈಜೋಡಿಸಲು ಜೆಡಿಯು ಕೈಜೋಡಿಸಿದಂತಾಗಿದೆ.
ಬಿಹಾರದಲ್ಲಿನ ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಕೂಡಾ ಸಂಜೆ 5ಗಂಟೆಗೆ ಸಭೆ ಕರೆದಿರುವುದಾಗಿ ಮೂಲಗಳು ಹೇಳಿವೆ. ಇಂದು ಬೆಳಗ್ಗೆ ಪಾಟ್ನಾದಲ್ಲಿ ಲಾಲೂ ಪ್ರಸಾದ್ ಯಾದವ್ ನಿವಾಸದಲ್ಲಿ ರಾಷ್ಟ್ರೀಯ ಜನತಾ ದಳದ ಶಾಸಕರು, ಪಕ್ಷದ ಮುಖಂಡರು ಭೇಟಿ ನೀಡಿ, ಮಾತುಕತೆ ನಡೆಸಿದ್ದರು.