Advertisement

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

02:50 PM Nov 11, 2020 | Nagendra Trasi |

ಪಾಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಗೊಂದಲಕ್ಕೆ ಅವಕಾಶವೇ ಇಲ್ಲ. ನಿತೀಶ್ ಕುಮಾರ್ ಅವರನ್ನು ಸಿಎಂ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಭಾರತೀಯ ಜನತಾ ಪಕ್ಷ ಬುಧವಾರ (ನವೆಂಬರ್ 11, 2020) ಸ್ಪಷ್ಟಪಡಿಸಿದೆ.

Advertisement

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 74ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಎನ್ ಡಿಎಯನ್ನು ಪೂರ್ಣ ಬಹುಮತದತ್ತ ಕೊಂಡೊಯ್ಯುವಂತೆ ಮಾಡುವಲ್ಲಿ ಯಶಸ್ವಿಯಾಗಿತ್ತು. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಈ ಬಾರಿ ಕೇವಲ 43 ಸ್ಥಾನ ಪಡೆದಿತ್ತು.

ಬಿಹಾರದ ಮೈತ್ರಿರಾಜಕಾರಣದಲ್ಲಿ ನಿತೀಶ್ ಕುಮಾರ್ ಅವರು “ಬಿಗ್ ಬ್ರದರ್” ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಬಿಹಾರದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ ಏಕೈಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಸಿಎಂ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ:ಹುಡುಗಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ: ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

ಆದರೆ ಊಹಾಪೋಹಗಳಿಗೆ ಬೆಲೆ ಕೊಡಬೇಕಾಗಿಲ್ಲ. ನಿತೀಶ್ ಜೀ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇದು ಬಿಜೆಪಿಯ ಬದ್ಧತೆಯಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಡೆಪ್ಯುಟಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

Advertisement

ಕೆಲವರು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕೆಲವರು ಕಡಿಮೆ ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆ. ಆದರೆ ನಾವೆಲ್ಲರೂ ಸಮಾನ ಪಾಲುದಾರರಾಗಿದ್ದೇವೆ ಎಂದು ಮೋದಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next