Advertisement

2024ರಲ್ಲಿ ಗೆಲ್ಲಲು ಸಾಧ್ಯವೇ? ಪ್ರಧಾನಿ ಮೋದಿಗೆ ಬಿಹಾರ ಸಿಎಂ ಸವಾಲು

09:21 PM Aug 10, 2022 | Team Udayavani |

ಪಾಟ್ನಾ:”2014ರ ಚುನಾವಣೆಯಲ್ಲಿ ಗೆದ್ದಿರಬಹುದು, ಆದರೆ, 2024ರಲ್ಲಿ ಗೆಲ್ಲಲು ಸಾಧ್ಯವೇ?’ ಹೀಗೆಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದ್ದಾರೆ.

Advertisement

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ ನಿತೀಶ್‌ ಕುಮಾರ್‌ “ನಾನು ಪ್ರಧಾನಿ ಹುದ್ದೆಗೆ ಆಕಾಂಕ್ಷಿ ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲ, 2024ರ ಲೋಕಸಭೆ ಚುನಾವಣೆ ವೇಳೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕೆಲಸವನ್ನು ಮಾಡುವ ಸಾಧ್ಯತೆ ಇದೆ. ಇದಕ್ಕೆ ಪೂರಕವೆಂಬಂತೆ ಪ್ರಮಾಣವಚನ ಮುಗಿದ ಈ ಬಗ್ಗೆ ಪದೇ ಪದೆ ಉಲ್ಲೇಖಿಸಿದ್ದಾರೆ.

ಹಾಗೆಯೇ, 2020ರ ವಿಧಾನಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಹುದ್ದೆ ವಹಿಸಿಸಿಕೊಳ್ಳಲು ನಿರಾಕರಿಸಿದ್ದೆ. ಆದರೆ ಹುದ್ದೆ ವಹಿಸಿಕೊಳ್ಳುವಂತೆ ಒತ್ತಡ ಹೇರಲಾಯಿತು ಎಂದರು. ಅದಕ್ಕೆ ತಿರುಗೇಟು ನೀಡಿರುವ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಶೀಲ್‌ ಕುಮಾರ್‌ ಮೋದಿ, 2025ರ ವಿಧಾನಸಭೆ ಚುನಾವಣೆಗಿಂತ ಮೊದಲೇ ಬಿಹಾರ ಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next