Advertisement

ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ: ಅಚ್ಚರಿಯ ಹೇಳಿಕೆ ನೀಡಿದ ನಿತೀಶ್ ಕುಮಾರ್

06:42 PM Dec 31, 2022 | Team Udayavani |

ಪಾಟ್ನಾ: ಮುಂದಿನ ಸಾರ್ವತ್ರಿಕ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುತ್ತಿರುವ ತಮ್ಮ ಮಿತ್ರ ಪಕ್ಷವಾದ ಕಾಂಗ್ರೆಸ್‌ ನೊಂದಿಗೆ ನನಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಿತೀಶ್ ಕುಮಾರ್ ಶನಿವಾರ ಸ್ಪಷ್ಟಪಡಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ನಾಯಕ ನಿತೀಶ್, ತಾನು ಪ್ರಧಾನಿ ಹುದ್ದೆಗೆ ‘ಹಕ್ಕುದಾರನಲ್ಲ’ ಎಂದು ಪುನರುಚ್ಚರಿಸಿದರು. ಆದರೂ ಅವರು ಬಿಜೆಪಿಯನ್ನು ವಿರೋಧಿಸುವ ಪಕ್ಷಗಳನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

2024 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರು ವಿರೋಧ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಇತ್ತೀಚೆಗೆ ಹೇಳಿದ್ದರು. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದರು.

2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರು ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಶುಕ್ರವಾರ ಹೇಳಿದ್ದರು. ಕಾಂಗ್ರೆಸ್‌ ನ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಮಲ್ ನಾಥ್, ಅವರು ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ, ಆದರೆ ದೇಶದ ಸಾಮಾನ್ಯ ಜನರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next