Advertisement
ಕಾರ್ಕಳ ಉಪವಿಭಾಗದ ಎಎಸ್‌ಪಿ ಕೃಷ್ಣಕಾಂತ್ ಮಾತನಾಡಿ, ಟ್ರಾಫಿಕ್ ಸಮಸ್ಯೆ ತೀವ್ರವಾಗಿ ಕಂಡುಬರುತ್ತಿರುವ ಇಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಕುರಿತು ಹೆಚ್ಚಿನ ಜಾಗೃತಿ ವಹಿಸಬೇಕು. ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಹಿಂದೆ ಮುಂದೆ ನೋಡದೇ ತತತ್‌ಕ್ಷಣವೇ ಸ್ಪಂದಿಸಬೇಕು. ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದವರಿಗೆ ಕಾನೂನಿನಲ್ಲಿ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಎಎಸ್‌ಪಿ ಕೃಷ್ಣಕಾಂತ್ ಅವರು, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪೊàಕೊÕà ಕಾಯಿದೆ ಮತ್ತು ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮದ ಕುರಿತು ತಿಳಿಸಿದರು. ನಿಟ್ಟೆ ವಿದ್ಯಾಸಂಸ್ಥೆಯ ರಿಜಿಸ್ಟ್ರಾರ್ ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಪೊಲೀಸ್ ಠಾಣೆಯ ಎಸ್‌ಐ ನಾಸಿರ್ ಹುಸೇನ್, ಹೆಡ್ ಕಾನ್‌ಸ್ಟೆಬಲ್ ಮಂಜುನಾಥ್ ಅಡಿಗ ಹಾಗೂ ಮಹಿಳಾ ಪೊಲೀಸ್ ಅಧಿಕಾರಿ ಸುಮಿತ್ರಾ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಡಾ| ವೀಣಾ ಕುಮಾರಿ ಬಿ. ಕೆ. ಸ್ವಾಗತಿಸಿ, ಅಪರ್ಣಾ ಮೆನನ್ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಎಂ. ವಂದಿಸಿದರು.