Advertisement

ಹೆಬ್ರಿ : ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾದ ದೈಹಿಕ ಶಿಕ್ಷಕ ನಿತ್ಯಾನಂದ ಶೆಟ್ಟಿ

03:41 PM May 20, 2022 | Team Udayavani |

ಹೆಬ್ರಿ : ಕೇರಳದ ತಿರುವನಂತಪುರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರು ಹೆರ್ಗ ವಿಠಲ ಶೆಟ್ಟಿ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಷ್ಟ್ರೀಯ ಕ್ರೀಡಾಪಟು ನಿತ್ಯಾನಂದ ಶೆಟ್ಟಿ ಅವರು 400ಮೀಟರ್ ಹರ್ಡಲ್ಸ್ ನಲ್ಲಿ ಚಿನ್ನದ ಪದಕ ಗಳಿಸಿ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Advertisement

ದೇಶದ ವಿವಿಧ ರಾಜ್ಯಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದು ಕನಾ೯ಟಕದಿಂದ ಪ್ರತಿನಿಧಿಸಿದ ಗ್ರಾಮೀಣ ಪ್ರದೇಶವಾದ ಕುಚ್ಚೂರಿನ ನಿತ್ಯಾನಂದ ಶೆಟ್ಟಿ ಅವರು ಚಿನ್ನದ ಪದಕ ಗಳಿಸಿರುವುದು ಹೆಮ್ಮೆಯ ಸಂಗತಿ.

ಮಾದರಿ ಕ್ರೀಡಾ ಸಾಧಕ;
ಈಗಾಗಲೇ ಕುಚ್ಚೂರು ಹೆಗ೯ ವಿಠ್ಠಲ ಶೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ಕಳೆದ 19 ವರ್ಷಗಳಿಂದ ಮಕ್ಕಳಿಗೆ ಗುಣಮಟ್ಟದ ಕ್ರೀಡಾ ತರಬೇತಿ ಮಾಗ೯ದಶ೯ನ ನೀಡುವ ಜತೆಗೆ ಕ್ರೀಡೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಹೆಗ್ಗಳಿಕೆ ನಿತ್ಯಾನಂದ ಶೆಟ್ಟಿ ಅವರದ್ದಾಗಿದೆ.

ಇದನ್ನೂ ಓದಿ : ಸುರಿಯುವ ಮಳೆಯಲ್ಲೇ ಪೌರಕಾರ್ಮಿಕರ ಪೊರಕೆ ಪ್ರತಿಭಟನೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next