Advertisement

ನಿವಾರ್ ಅಬ್ಬರ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಎಚ್ಚರಿಕೆ

11:03 AM Nov 26, 2020 | sudhir |

ಬೆಂಗಳೂರು : ತಮಿಳುನಾಡಿನ ಕರಾವಳಿ ಭಾಗದಲ್ಲಿ ಅಪ್ಪಳಿಸಿದ ನಿವಾರ್ ಚಂಡಮಾರುತದ ಅಬ್ಬರ ಜೋರಾಗಿದ್ದು ಇದೀಗ ಕರ್ನಾಟಕಕ್ಕೂ ಪರಿಣಾಮ ಬೀರಲಾರಂಭಿಸಿದ್ದು ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತ ಅಬ್ಬರ ಜೋರಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಪರಿಣಾಮ ರಾಜ್ಯದ ಎಂಟು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ:ಕಾರ್ಮಿಕ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ; ಪಶ್ಚಿಮಬಂಗಾಳದಲ್ಲಿ ಬಂದ್ ಗೆ ವಿರೋಧ, ಘರ್ಷಣೆ

ಕರಾವಳಿಯಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next