ಮಂಗಳೂರು: ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಹಲವರಿಗೆ ಕೋವಿಡ್-19 ಸೋಂಕು ತಗುಲಿದ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಎಲ್ಲರ ಮೇಲೂ ನಿಗಾ ಇಡಲಾಗಿದೆ.
ಇದೇ ಸಮಯದಲ್ಲಿ ದೆಹಲಿ ನಿಜಾಮುದ್ದೀನ್ ಮರ್ಕಜ್ ನಂಟು ರಾಜ್ಯದ ಮಂಗಳೂರಿಗೂ ವಿಸ್ತರಿಸಿದೆ. ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದವರನ್ನು ಗುರುತಿಸಿ ಅವರನ್ನು ನಿಗಾದಲ್ಲಿಡುವ ಕಾರ್ಯಕ್ಕೆ ಮುಂದಾಗಿದ್ದು, ಇದೇ ಹಿನ್ನಲೆಯಲ್ಲಿ ಮಂಗಳೂರಿನ ತೊಕ್ಕೊಟ್ಟು ಮೂಲದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆ ವೆನ್ಲಾಕ್ ಗೆ ಸೇರಿಸಲಾಗಿದೆ.
ಮಂಗಳೂರು ಹೊರವಲಯದ ತೊಕ್ಕೊಟ್ಟು ಮೂಲದ ವ್ಯಕ್ತಿ ಇತ್ತೀಚೆಬೆ ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದು, ಆದರೆ ಯಾವುದೇ ಮುಂಜಾಗೃತೆ ವಹಿಸದೇ ಇಲ್ಲಿ ಸುತ್ತಾಡುತ್ತಿದ್ದ ಎನ್ನಲಾಗಿದೆ. ಈತ ಸ್ಥಳೀಯವಾಗಿ ಮನೆ ಮನೆಗೆ ಅಕ್ಕಿ ನೀಡುತ್ತಿದ್ದ ಎನ್ನಲಾಗಿದೆ.
ಮಂಗಳವಾರ ತಡರಾತ್ರಿ ಈತ ನಿಜಾಮುದ್ದೀನ್ ಹೋಗಿ ಬಂದ ಮಾಹಿತಿ ತಿಳಿದ ಪೊಲೀಸರು ಮತ್ತು ಆರೋಗ್ಯಾಧಿಕಾರಿಗಳು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಹಲವರು ದೆಹಲಿಯ ಪ್ರಾರ್ಥನೆಯಲ್ಲಿ ನಲ್ಲಿ ಪಾಲ್ಗೊಂಡಿರುವ ಶಂಕೆಯಿದ್ದು, ಪಾಲ್ಗೊಂಡವರನ್ನು ಹುಡುಕುವ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ನಿರತವಾಗಿದೆ.