ಚಿಕ್ಕಬಳ್ಳಾಪುರ: ಎನ್.ಎಂ.ನಾಗರಾಜ ಅವರು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಬುಧವಾರ ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಅವರು, ಸರ್ಕಾರದ ನೀತಿ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಶಿವಶಂಕರ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಅಪರ ಜಿಲ್ಲಾಧಿಕಾರಿ ಹೆಚ್. ಅಮರೇಶ್, ಚಿಕ್ಕಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ಗಣಪತಿಶಾಸ್ತ್ರಿ, ಗೌರಿಬಿದನೂರು ತಾಲ್ಲೂಕು ತಹಸೀಲ್ದಾರ್ ಶ್ರೀನಿವಾಸ್, ಬಾಗೇಪಲ್ಲಿ ತಾಲ್ಲೂಕು ತಹಸೀಲ್ದಾರ್ ವೈ.ವಿ.ರವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಈ ಹಿಂದೆ ಕರ್ನಾಟಕ ರಾಜ್ಯ ವೈದ್ಯಕೀಯ ಪರಿಕರಗಳ ಪೂರೈಕೆ ನಿಗಮ ನಿಯಮಿತದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.