Advertisement
ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದು, ನಾನು ಅವರ ಹೆಸರನ್ನು ಹೇಳಲು ಹೋಗುವುದಿಲ್ಲ. ಆದರೆ ಅವರೆಲ್ಲರ ಮೇಲೂ ಕ್ರಮ ಕೈಗೊಳ್ಳಬೇಕು. ನ್ಯಾಯ ಸಿಗಬೇಕು. ಪ್ರಕರಣದಿಂದ ಯಾವ ಹೆಣ್ಣು ಮಕ್ಕಳು ಅಪಾಯಕ್ಕೆ ಸಿಕ್ಕಿದ್ದಾರೋ ಅವರಿಗೆಲ್ಲ ಪರಿಹಾರ ನೀಡಬೇಕು ಎಂದು ದೇವೇಗೌಡರು ಆಗ್ರಹಿಸಿದರು.
ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಅವರ ಬಗ್ಗೆ ಒಂದು ಘಟನೆ ನಡೆಯುತ್ತಿದೆ. ರೇವಣ್ಣ ಅವರ ಬಗ್ಗೆ ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ. ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಆ ಘಟನೆ ಬಗ್ಗೆ ಕುಮಾರಸ್ವಾಮಿಯವರು ಇಡೀ ನಮ್ಮ ಕುಟುಂಬದ ಪರವಾಗಿ, ಕಾನೂನು ಏನಿದೆಯೋ ಆ ವ್ಯಾಪ್ತಿಯಲ್ಲಿ ಏನೇನೂ ಕ್ರಮ ಕೈಗೊಳ್ಳಬೇಕೋ, ಆ ಕ್ರಮ ಕೈಗೊಳ್ಳುವುದು ಸರಕಾರದ ಜವಾಬ್ದಾರಿ ಎಂಬುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು. ತಪ್ಪು ಮಾಡಿದ್ದವರ ವಿರುದ್ಧ ಕ್ರಮ
ರೇವಣ್ಣ ಅವರ ಬಗ್ಗೆ ಯಾವ ರೀತಿ ಪ್ರಕರಣ ಸೃಷ್ಟಿ ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಗೊತ್ತಿದೆ. ಒಂದು ಕೇಸ್‌ನಲ್ಲಿ ನ್ಯಾಯಾಲಯ ಜಾಮೀನು ನೀಡಿದೆ.
Related Articles
Advertisement
ಕುಮಾರಸ್ವಾಮಿ ಪ್ರತಿಕ್ರಿಯಿಸುತ್ತಾರೆಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈವಾಡ ಮತ್ತು ನನಗೆ ನೂರು ಕೋಟಿ ಆಫರ್ ನೀಡಿದ್ದಾರೆ ಎಂಬ ಬಿಜೆಪಿ ಮುಖಂಡ ದೇವರಾಜೇಗೌಡರ ಹೇಳಿಕೆ ಬಗ್ಗೆ ಪ್ರಕ್ರಿಯಿಸಿದ ಮಾಜಿ ಪ್ರಧಾನಿ, ಅವರ ಹೇಳಿಕೆಯನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಕುಮಾರಸ್ವಾಮಿ ಎಲ್ಲ ವಿಷಯದಲ್ಲೂ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅವರಿಗೆ ಯಾವುದೇ ವಿಷಯ ಬಂದರೂ ಅವರೇ ಪ್ರತಿಕ್ರಿಯಿಸುತ್ತಾರೆ ಎಂದರು. ಕುಮಾರಸ್ವಾಮಿ ಪ್ರತಿಕ್ರಿಯಿಸುತ್ತಾರೆ
ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈವಾಡ ಮತ್ತು ನನಗೆ ನೂರು ಕೋಟಿ ಆಫರ್ ನೀಡಿದ್ದಾರೆ ಎಂಬ ಬಿಜೆಪಿ ಮುಖಂಡ ದೇವರಾಜೇಗೌಡರ ಹೇಳಿಕೆ ಬಗ್ಗೆ ಪ್ರಕ್ರಿಯಿಸಿದ ಮಾಜಿ ಪ್ರಧಾನಿ, ಅವರ ಹೇಳಿಕೆಯನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಕುಮಾರಸ್ವಾಮಿ ಎಲ್ಲ ವಿಷಯದಲ್ಲೂ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅವರಿಗೆ ಯಾವುದೇ ವಿಷಯ ಬಂದರೂ ಅವರೇ ಪ್ರತಿಕ್ರಿಯಿಸುತ್ತಾರೆ ಎಂದರು. ಫಲಿತಾಂಶದ ಬಳಿಕ ಪ್ರತಿಕ್ರಿಯೆ
ನಾನು ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕಡೆ ಪ್ರಚಾರ ಮಾಡಿದ್ದೇನೆ. ಮತ್ತೆ ಜೂನ್ 4ರಂದು ಚುನಾವಣ ಫಲಿತಾಂಶ ಬಂದ ಮೇಲೆ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರನ್ನು ಭೇಟಿ ಮಾಡುತ್ತೇನೆ. ನಾನು ಅಲ್ಲಿಯವರೆಗೂ ಯಾರನ್ನೂ ಭೇಟಿ ಮಾಡೋದಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.