Advertisement

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

12:20 AM May 19, 2024 | Team Udayavani |

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಕೇಳಿ ಬಂದಿರುವ ಆಶ್ಲೀಲ ಪೆನ್‌ಡ್ರೈವ್‌ ಪ್ರಕರಣ ಮತ್ತು ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್‌ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವ ತಕರಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದು, ನಾನು ಅವರ ಹೆಸರನ್ನು ಹೇಳಲು ಹೋಗುವುದಿಲ್ಲ. ಆದರೆ ಅವರೆಲ್ಲರ ಮೇಲೂ ಕ್ರಮ ಕೈಗೊಳ್ಳಬೇಕು. ನ್ಯಾಯ ಸಿಗಬೇಕು. ಪ್ರಕರಣದಿಂದ ಯಾವ ಹೆಣ್ಣು ಮಕ್ಕಳು ಅಪಾಯಕ್ಕೆ ಸಿಕ್ಕಿದ್ದಾರೋ ಅವರಿಗೆಲ್ಲ ಪರಿಹಾರ ನೀಡಬೇಕು ಎಂದು ದೇವೇಗೌಡರು ಆಗ್ರಹಿಸಿದರು.

ಸರಕಾರದ ಜವಾಬ್ದಾರಿ
ಪ್ರಜ್ವಲ್‌ ರೇವಣ್ಣ ಹಾಗೂ ರೇವಣ್ಣ ಅವರ ಬಗ್ಗೆ ಒಂದು ಘಟನೆ ನಡೆಯುತ್ತಿದೆ. ರೇವಣ್ಣ ಅವರ ಬಗ್ಗೆ ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಕಾಮೆಂಟ್‌ ಮಾಡುವುದಿಲ್ಲ. ಪ್ರಜ್ವಲ್‌ ರೇವಣ್ಣ ಹೊರಗಡೆ ಹೋಗಿದ್ದಾರೆ. ಆ ಘಟನೆ ಬಗ್ಗೆ ಕುಮಾರಸ್ವಾಮಿಯವರು ಇಡೀ ನಮ್ಮ ಕುಟುಂಬದ ಪರವಾಗಿ, ಕಾನೂನು ಏನಿದೆಯೋ ಆ ವ್ಯಾಪ್ತಿಯಲ್ಲಿ ಏನೇನೂ ಕ್ರಮ ಕೈಗೊಳ್ಳಬೇಕೋ, ಆ ಕ್ರಮ ಕೈಗೊಳ್ಳುವುದು ಸರಕಾರದ ಜವಾಬ್ದಾರಿ ಎಂಬುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ತಪ್ಪು ಮಾಡಿದ್ದವರ ವಿರುದ್ಧ ಕ್ರಮ
ರೇವಣ್ಣ ಅವರ ಬಗ್ಗೆ ಯಾವ ರೀತಿ ಪ್ರಕರಣ ಸೃಷ್ಟಿ ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಗೊತ್ತಿದೆ. ಒಂದು ಕೇಸ್‌ನಲ್ಲಿ ನ್ಯಾಯಾಲಯ ಜಾಮೀನು ನೀಡಿದೆ.

ಇನ್ನೊಂದು ನಾಡಿದ್ದು ತೀರ್ಪು ಬರಲಿದೆ. ಇದೆಲ್ಲಾ ಅದು ಯಾವ ರೀತಿ ನಡೆಯಿತು ಎಂಬುದರ ವಿಶ್ಲೇಷಣೆ ಮಾಡುವುದಿಲ್ಲ. ಕುಮಾರಸ್ವಾಮಿ ಈಗಾಗಲೇ ಪ್ರತಿಕ್ರಿಯಿಸಿದ್ದು, ಈ ಘಟನೆ ಬಗ್ಗೆ ಯಾರನ್ನು ರಕ್ಷಣೆ ಮಾಡಬೇಕಿಲ್ಲ ಎಂದು ಹೇಳಿದ್ದಾರೆ. ಇದರಲ್ಲಿ ಭಾಗಿಯಾಗಿರುವ, ಪ್ರಜ್ವಲ್‌ ಸೇರಿ ತಪ್ಪು ಮಾಡಿದ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

Advertisement

ಕುಮಾರಸ್ವಾಮಿ ಪ್ರತಿಕ್ರಿಯಿಸುತ್ತಾರೆ
ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೈವಾಡ ಮತ್ತು ನನಗೆ ನೂರು ಕೋಟಿ ಆಫ‌ರ್‌ ನೀಡಿದ್ದಾರೆ ಎಂಬ ಬಿಜೆಪಿ ಮುಖಂಡ ದೇವರಾಜೇಗೌಡರ ಹೇಳಿಕೆ ಬಗ್ಗೆ ಪ್ರಕ್ರಿಯಿಸಿದ ಮಾಜಿ ಪ್ರಧಾನಿ, ಅವರ ಹೇಳಿಕೆಯನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಕುಮಾರಸ್ವಾಮಿ ಎಲ್ಲ ವಿಷಯದಲ್ಲೂ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅವರಿಗೆ ಯಾವುದೇ ವಿಷಯ ಬಂದರೂ ಅವರೇ ಪ್ರತಿಕ್ರಿಯಿಸುತ್ತಾರೆ ಎಂದರು.

ಕುಮಾರಸ್ವಾಮಿ ಪ್ರತಿಕ್ರಿಯಿಸುತ್ತಾರೆ
ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೈವಾಡ ಮತ್ತು ನನಗೆ ನೂರು ಕೋಟಿ ಆಫ‌ರ್‌ ನೀಡಿದ್ದಾರೆ ಎಂಬ ಬಿಜೆಪಿ ಮುಖಂಡ ದೇವರಾಜೇಗೌಡರ ಹೇಳಿಕೆ ಬಗ್ಗೆ ಪ್ರಕ್ರಿಯಿಸಿದ ಮಾಜಿ ಪ್ರಧಾನಿ, ಅವರ ಹೇಳಿಕೆಯನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಕುಮಾರಸ್ವಾಮಿ ಎಲ್ಲ ವಿಷಯದಲ್ಲೂ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅವರಿಗೆ ಯಾವುದೇ ವಿಷಯ ಬಂದರೂ ಅವರೇ ಪ್ರತಿಕ್ರಿಯಿಸುತ್ತಾರೆ ಎಂದರು.

ಫ‌ಲಿತಾಂಶದ ಬಳಿಕ ಪ್ರತಿಕ್ರಿಯೆ
ನಾನು ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕಡೆ ಪ್ರಚಾರ ಮಾಡಿದ್ದೇನೆ. ಮತ್ತೆ ಜೂನ್‌ 4ರಂದು ಚುನಾವಣ ಫ‌ಲಿತಾಂಶ ಬಂದ ಮೇಲೆ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರನ್ನು ಭೇಟಿ ಮಾಡುತ್ತೇನೆ. ನಾನು ಅಲ್ಲಿಯವರೆಗೂ ಯಾರನ್ನೂ ಭೇಟಿ ಮಾಡೋದಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next