Advertisement

ಒಡಿಶಾದಲ್ಲಿ ಪ್ರಾದೇಶಿಕ ಪಕ್ಷಗಳ ಜತೆ BJP ಮೈತ್ರಿ ಇಲ್ಲ: ಅಮಿತ್ ಶಾ

05:57 PM Sep 07, 2017 | Sharanya Alva |

ನವದೆಹಲಿ: ಒಡಿಶಾದಲ್ಲಿ ಚುನಾವಣಾ ಪೂರ್ವದಲ್ಲಿ ಯಾವುದೇ ಪ್ರಾದೇಶಿಕ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುರುವಾರ ತಿಳಿಸಿದ್ದಾರೆ.

Advertisement

ಒಡಿಶಾ ಪ್ರವಾದಲ್ಲಿರುವ ಶಾ ಅವರು ಭುವನೇಶ್ವರದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ, 2019ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಬಿಜೆಪಿ ಅಖಾಡಕ್ಕಿಳಿಯಲಿದೆ ಎಂದು ಹೇಳಿದರು.

ಶುಕ್ರವಾರ ಅಮಿತ್ ಶಾ ಅವರು ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗುವ ನಿರೀಕ್ಷೆ ಇದೆ, ಅಲ್ಲದೇ ಜನತಾ ಮೈದಾನದಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next