Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ನಾನು ಮಾಡಿರುವ ಸೇವೆಯ ಆಧಾರದ ಮೇಲೆ ಪ್ರಶಸ್ತಿ ಬಂದಿದೆ ಅದಕ್ಕಾಗಿ ಲಾಭಿ ಮಾಡಿಲ್ಲ ಎಂದ ಮಾಜಿ ಶಾಸಕರು ಇನ್ನೂ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷ ಸ್ಥಾನವನ್ನು ಪಡೆದುಕೊಂಡು ಉಪಾಧ್ಯಕ್ಷ ಸ್ಥಾನವನ್ನು ನೀಡಿ ಎಂದು ಕೇಳಿದೇವು. ಆದರೇ ಅದಕ್ಕೆ ಅವರು ಒಪ್ಪಲಿಲ್ಲ ಹೀಗಾಗಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿದ್ದೇವೆ ಹೊರತು ಬಿಜೆಪಿ ಪಕ್ಷವನ್ನು ಬೆಂಬಲಿಸಿಲ್ಲವೆಂದು ಸ್ಪಷ್ಟಪಡಿಸಿ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ಯಾವುದೇ ರೀತಿಯಲ್ಲಿ ಸಖ್ಯ ಬೆಳೆಸಿಲ್ಲ ಸಾಫ್ಟ್ ಕಾರ್ನರ್ ಆಗುವ ಪ್ರಶ್ನೆಯೇ ಇಲ್ಲ ಎಂದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಭ್ರಷ್ಟಚಾರದಿಂದ ಅಧಿಕಾರದಲ್ಲಿ ಮುಂದುವರೆಯುತ್ತೇವೆ ಎಂದು ಕೆಲವರು ಭ್ರಮೆಯಲ್ಲಿದ್ದಾರೆ ಕ್ಷೇತ್ರದ ಮತದಾರರು ಎಲ್ಲವನ್ನು ಅವಲೋಕನ ಮಾಡುತ್ತಿದ್ದಾರೆ. ಎಲ್ಲದಕ್ಕೂ ಕೊನೆ ಇರುತ್ತದೆ ಪ್ರಸ್ತುತ ಭ್ರಷ್ಟಚಾರದ ರಾಜನೀತಿ ಮೇಲುಗೈ ಇರಬಹುದು ಅದು ಒಂದು ದಿನ ಕೆಳಗೆ ಬರಲೇ ಬೇಕು. ಹೀಗಾಗಿ ಕ್ಷೇತ್ರದಲ್ಲಿ ಭ್ರಷ್ಟ ರಾಜಕೀಯ ವ್ಯವಸ್ಥೆ ನಶಿಸಲಿದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವರನ್ನು ಆಯ್ಕೆ ಮಾಡುವ ದಿನಗಳು ದೂರವಿಲ್ಲ. ಕುಮಾರಣ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಸರ್ಕಾರಕ್ಕೆ ಬಂದರೇ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಾವರಿ ಸಮಸ್ಯೆ ಸಹಿತ ಎಲ್ಲಾ ಸಮಸ್ಯೆಗಳಿಗೆ ಶಾಶ್ವತವಾಗಿ ಮುಕ್ತಿ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.